×
Ad

ಸರಕಾರಿ ನೌಕರರ ಕ್ರೀಡಾಕೂಟ : ಶಾಸಕ ಡಾ. ಭರತ್ ಶೆಟ್ಟಿ ಚಾಲನೆ

Update: 2021-02-11 12:41 IST

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ದಕ್ಷಿಣ ಕನ್ನಡ ಶಾಖೆ ಮಂಗಳೂರು ಜಂಟಿ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸರಕಾರಿ ನೌಕರರ ಕ್ರೀಡಾಕೂಟ 2020-21ಇದಕ್ಕೆ  ಮಂಗಳಾ ಕ್ರೀಡಾಂಗಣದಲ್ಲಿ  ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಗುರುವಾರ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ  ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಮೇಯರ್ ದಿವಾಕರ ಪಾಂಡೇಶ್ವರ್, ದ.ಕ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ, ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮಿ ಗಟ್ಟಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News