×
Ad

ಮಂಗಳೂರಿನ ಕಾಲೇಜಿನಲ್ಲಿ ಮುಂದುವರಿದ ರ್‍ಯಾಗಿಂಗ್; ಕೇರಳದ 11 ವಿದ್ಯಾರ್ಥಿಗಳ ಬಂಧನ

Update: 2021-02-11 17:31 IST

ಮಂಗಳೂರು, ಫೆ.11: ದೇರಳಕಟ್ಟೆಯ ಕಣಚೂರು ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಯನ್ಸ್ ಕಾಲೇಜಿನಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ರ್‍ಯಾಗಿಂಗ್ ನಡೆಸಿದ ಆರೋಪದಲ್ಲಿ 11 ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕೇರಳದ ಕ್ಯಾಲಿಕಟ್‌ನ ಪಾಳಿಯಾಡ್ ನಿವಾಸಿ ಮುಹಮ್ಮದ್ ಶಮ್ಮಾಸ್ (19), ಕೊಟ್ಟಾಯಂ ವೈಕ್ಯಂ ನಿವಾಸಿ ಅಕ್ಷಯ್ ಕೆ.ಎಸ್. (19), ಕೊಟ್ಟಾಯಂ ಅಯರ್ ಕುನ್ನ ರೋಬಿನ್ ಬಿಜು (20), ಕಾಸರಗೋಡು ಉಳ್ಳೂರಿನ ಅಬ್ದುಲ್ ಅನಸ್ (21), ಚಿಟ್ಟಾರಿಕಲ್ ಜೆಫಿನ್ ರೋಯಿಚನ್ (19), ಕೊಟ್ಟಾಯಂನ ಅಲ್ವಿನ್ ಜೋಯ್ (19), ಜೆರೋನ್ ಸಿರಿಲ್ (19), ಪತ್ತನಂತಿಟ್ಟ ನಿವಾಸಿ ಸೂರಜ್ (19), ಚೆಮ್ಮತ್ತೂರು ಆಸಿನ್ ಬಾಬು (19), ಮಲಪುರಂ ಜುಬಿನ್ ಮೆಹರೂಫ್ (21), ಅಬ್ದುಲ್ ಬಾಸಿತ್ (19) ಬಂಧಿತ ಆರೋಪಿಗಳು.

ಕಾಲೇಜ್‌ನಲ್ಲಿ ಎರಡನೇ ವರ್ಷದ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿರುವ 18 ವಿದ್ಯಾರ್ಥಿಗಳು ರ್‍ಯಾಗಿಂಗ್ ಮಾಡಿದ್ದಾರೆಂದು ಆರೋಪಿಸಿ ಕಾಲೇಜಿನ ಕ್ಯಾಂಪಸ್ ಆಫೀಸರ್ ಮಾರ್ಟಿನ್ ಜೋರ್ಜ್ ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News