ಫೆ.18ಕ್ಕೆ ಸಚಿವ ಸಂಪುಟ ಸಭೆ: ಆಯವ್ಯಯ ಮಂಡನೆಗೆ ದಿನಾಂಕ ನಿಗದಿ ಸಾಧ್ಯತೆ

Update: 2021-02-11 14:19 GMT

ಬೆಂಗಳೂರು, ಫೆ.10: ರಾಜ್ಯ ಬಜೆಟ್ ಮಂಡನೆ ಅಧಿವೇಶನಕ್ಕೆ ದಿನಾಂಕ ನಿಗದಿ ಸೇರಿದಂತೆ ಇನ್ನಿತರ ಮಹತ್ವದ ವಿಚಾರಗಳ ಸಮಾಲೋಚನೆಗೆ ಫೆ.18ಕ್ಕೆ ರಾಜ್ಯ ಸಚಿವ ಸಂಪುಟ ಸಭೆ ಕರೆಯಲಾಗಿದೆ.

ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ಫೆ.18ರ ಗುರುವಾರ ಸಂಜೆ 5:30ಕ್ಕೆ ನಡೆಯಲಿರುವ ಸಂಪುಟ ಸಭೆಯ ಅಧ್ಯಕ್ಷತೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ವಹಿಸಲಿದ್ದು, ಸಚಿವ ಸಂಪುಟ ಸಹೋದ್ಯೋಗಿಗಳು ಪಾಲ್ಗೊಳ್ಳಲಿದ್ದಾರೆ.

ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ(ಎಸ್ಟಿ)ಕ್ಕೆ ಸೇರ್ಪಡೆ, ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2 ‘ಎ' ಮೀಸಲಾತಿ, ಪರಿಶಿಷ್ಟ ಪಂಗಡ(ಎಸ್ಟಿ)ಕ್ಕೆ ಮೀಸಲಾತಿ ಹೆಚ್ಚಳ ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆಯೂ ಸಂಪುಟದಲ್ಲಿ ಚರ್ಚಿಸುವ ಸಾಧ್ಯತೆಗಳಿವೆ. ಇದೇ ವೇಳೆ 2021-22ನೆ ಸಾಲಿನ ಆಯವ್ಯಯದಲ್ಲಿ ಮಂಡಿಸಲಿರುವ ಯೋಜನೆಗಳ ಬಗ್ಗೆಯೂ ಅಂತಿಮ ತೀರ್ಮಾನ ಕೈಗೊಳ್ಳುವ ನಿರೀಕ್ಷೆಗಳಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News