ಜಾತಿ, ಬುಡಕಟ್ಟುಗಳ ಆಯೋಗಕ್ಕೆ ಇಬ್ಬರು ಸದಸ್ಯರ ನೇಮಕ
Update: 2021-02-11 22:49 IST
ಬೆಂಗಳೂರು, ಫೆ.11: ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗಕ್ಕೆ ಇಬ್ಬರು ಸದಸ್ಯರುಗಳನ್ನು ನಾಮನಿರ್ದೇಶನ ಮಾಡಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಕ ಮಾಡಿ ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್.ವೆಂಕಟೇಶ್ ದೊಡ್ಡೇರಿ, ಚಿತ್ರದುರ್ಗ ಜಿಲ್ಲೆಯ ಜಿ.ಪಿ.ಜಯಪಾಲಯ್ಯ ಅವರನ್ನು ಆಯೋಗಕ್ಕೆ ಸದಸ್ಯರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಲಾಗಿದೆ.