ಸಾರಿಗೆ ನೌಕರರ ಮೇಲಿನ ಕಿರುಕುಳ ತಪ್ಪಿಸಲು ಸೂಕ್ತ ಕ್ರಮ: ಇಲಾಖೆಯ ಅಧೀನ ಕಾರ್ಯದರ್ಶಿ

Update: 2021-02-11 17:20 GMT

ಬೆಂಗಳೂರು, ಫೆ.11: ಸಾರಿಗೆ ನೌಕರರ ಮೇಲೆ ನಡೆಯುತ್ತಿರುವ ಕಿರುಕುಳ ತಪ್ಪಿಸಲು ಘಟಕಗಳ ವ್ಯಾಪ್ತಿಯಲ್ಲಿ ಸೂಕ್ತ ಆಡಳಿತ ವ್ಯವಸ್ಥೆಯನ್ನು ರೂಪಿಸಲಾಗುವುದೆಂದು ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ಸತ್ಯವತಿ ತಿಳಿಸಿದ್ದಾರೆ.

ಈ ಕುರಿತು ಕೆಎಸ್ಸಾರ್ಟಿಸಿಯ ನಾಲ್ಕು ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿರುವ ಅವರು, ಸಾರಿಗೆ ನೌಕರರಿಗೆ ಸರಕಾರಿ ಆಸ್ಪತ್ರೆಗಳು ಮತ್ತು ಸರಕಾರದ ಸ್ವಾಯತ್ತ ಅನುದಾನಿತ ಆಸ್ಪತ್ರೆಗಳು ನಗದುರಹಿತ ಚಿಕಿತ್ಸೆಯನ್ನು ನೀಡುವ ಸಂಬಂಧ ಆಸ್ಪತ್ರೆಗಳೊಂದಿಗೆ ಒಪ್ಪಂದ ಮಾಡಿಕೊಂಡು ನಗದುರಹಿತ ಪದ್ಧತಿಯನ್ನು ಜಾರಿಗೆ ತರಲಾಗುವುದೆಂದು ಅವರು ತಿಳಿಸಿದ್ದಾರೆ.

ಸರಕಾರಿ ನೌಕರರಿಗೆ ವೈದ್ಯಕೀಯ ವೆಚ್ಚವನ್ನು ಮರುಪಾವತಿಸುತ್ತಿರುವ ಮಾದರಿಯಲ್ಲಿ ಸಿಜಿಎಚ್‍ಎಸ್ ದರದನ್ವಯ ಚಿಕಿತ್ಸಾ ವೆಚ್ಚವನ್ನು ಮರುಪಾವತಿಸಲಾಗುವುದೆಂದು ಅವರು ಮಾಹಿತಿ ನೀಡಿದ್ದಾರೆ.

ಕೋವಿಡ್-19ಸೋಂಕು ತಗುಲಿದ ನಿಗಮದ ನೌಕರರು ಮರಣ ಹೊಂದಿದ ಸಂದರ್ಭದಲ್ಲಿ ಅವರ ಕುಟುಂಬಗಳಿಗೆ ಸರಕಾರಿ ನೌಕರರಿಗೆ ನೀಡಿದಂತೆ ಸಂಸ್ಥೆಯ ಆಂತರಿಕ ಸಂಪನ್ಮೂಲಗಳಿಂದ 30 ಲಕ್ಷ ರೂ.ಪರಿಹಾರವನ್ನು ನೀಡುವುದು. ಸಾರಿಗೆ ಸಂಸ್ಥೆಗಳಲ್ಲಿ ಎಚ್‍ಆರ್‍ಎಂಎಸ್ ವ್ಯವಸ್ಥೆಯನ್ನು ಜಾರಿಗೊಳಿಸುವುದು ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News