×
Ad

ಪಜೀರ್ ಗ್ರಾ.ಪಂ.ಅಧ್ಯಕ್ಷೆಯಾಗಿ ಮೇರಿ ಫೆರ್ನಾಂಡಿಸ್, ಉಪಾಧ್ಯಕ್ಷರಾಗಿ ರಫೀಕ್ ಪಜೀರ್

Update: 2021-02-11 23:07 IST

ಪಜೀರ್ ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿ ಮೇರಿ ಫೆರ್ನಾಂಡಿಸ್  ಹಾಗೂ ಉಪಾಧ್ಯಕ್ಷರಾಗಿ ರಫೀಕ್ ಪಜೀರ್ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪಜೀರ್ ಗ್ರಾಮ ಪಂಚಾಯತ್ ಗೆ ಈ ಬಾರಿ  17 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರು 12 , ಎಸ್ ಡಿಪಿಐ ಬೆಂಬಲಿತರು 4 ಹಾಗೂ  ಬಿಜೆಪಿ ಬೆಂಬಲಿತರು ಒಂದು ಸ್ಥಾನವನ್ನು ಪಡೆದುಕೊಂಡಿದ್ದರು.

ಅಧ್ಯಕ್ಷ ಉಪಾಧ್ಯಕ್ಷ ಮೀಸಲಾತಿ ಪಟ್ಟಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಪುರುಷ ಬಂದಿತ್ತು. ಇತರ ಪಕ್ಷಗಳ ಬೆಂಬಲಿತ ಅಭ್ಯರ್ಥಿಗಳ ವಿರೋಧ ಇಲ್ಲದ ಕಾರಣ  ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News