ಗಾಂಜಾ ಸೇವನೆ ಆರೋಪ : ಇಬ್ಬರ ಬಂಧನ
ಮಂಗಳೂರು, ಫೆ.11: ಪ್ರತ್ಯೇಕ ಪ್ರಕರಣದಲ್ಲಿ ಗಾಂಜಾ ಸೇವನೆ ಮಾಡಿದ ಆರೋಪದಲ್ಲಿ ಇಬ್ಬರನ್ನು ನಗರ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣ 1: ಬಿಜೈನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಬಳಿ ಗಾಂಜಾ ಸೇವನೆ ಮಾಡುತ್ತಿದ್ದ ಆಪಾದಿತ ನೀಕ್ಷಿತ್ ಪೂಜಾರಿ (22) ಎಂಬಾತನನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ.
ಗುರುವಾರ ಮಧ್ಯಾಹ್ನ ಆರೋಪಿ ಗಾಂಜಾ ಸೇವನೆ ಮಾಡುತಿದ್ದ ಬಗ್ಗೆ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದು ಕೊಂಡಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲೂ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣ 2: ಗುರುವಾರ ಬೆಳಗ್ಗೆ 9ಗಂಟೆಗೆ ಬಿಕರ್ನಕಟ್ಟೆ ಮೇಲ್ಸೇತುವೆ ಬಳಿ ಮಾದಕ ವಸ್ತು ಸೇವನೆ ಮಾಡಿದ ಆರೋಪದಲ್ಲಿ ಸಿದ್ಧಿಕ್ (26) ಎಂಬಾತನನ್ನು ನಗರ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಮಾದಕ ವಸ್ತುವನ್ನು ಸೇವನೆ ಮಾಡಿ ನಶೆಯಲ್ಲಿ ಜೋರಾಗಿ ಮಾತನಾಡುತ್ತಾ, ಕಿರುಚಾಡುತ್ತಿದ್ದ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಮಾಹಿತಿ ಮೇರೆಗೆ ನಗರ ಪೊಲೀಸರು ಬಂಧಿಸಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲೂ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ.