ಫೆಲೋಶಿಪ್‍ಗಾಗಿ ಅರ್ಜಿ ಆಹ್ವಾನ

Update: 2021-02-11 17:59 GMT

ಬೆಂಗಳೂರು, ಫೆ.11: ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ವತಿಯಿಂದ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಪಂಗಡದ ನಾಲ್ಕು ಅಭ್ಯರ್ಥಿಗಳಿಗೆ ಫೆಲೋಶಿಪ್‍ಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಗರಿಷ್ಠ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದ್ದು, ಫೆಲೋಶಿಪ್ ಅಧ್ಯಯನಾವಧಿ 10 ತಿಂಗಳಾಗಿರುತ್ತದೆ. ಆ ನಂತರ ಅಧ್ಯಯನದ ವರದಿಯನ್ನು ಕುವೆಂಪು ಭಾಷಾ ಭಾರತಿ ಪ್ರಾಧಿಕಾರಕ್ಕೆ ಸಲ್ಲಿಸಬೇಕಾಗುತ್ತದೆ.

ಆಸಕ್ತರು ಫೆಲೋಶಿಪ್‍ನ ನಿಯಮಗಳು ಮತ್ತು ಅರ್ಜಿ ನಮೂನೆಯನ್ನು ಪ್ರಾಧಿಕಾರದ ಅಂತರ್ಜಾಲತಾಣ www.kuvempubhashabharathi.org ನಲ್ಲಿ ಫೆ.10ರಿಂದ ಪಡೆದುಕೊಳ್ಳಬಹುದಾಗಿದೆ.

ಪ್ರಾಧಿಕಾರದ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅರ್ಜಿಯೊಂದಿಗೆ ಅನುವಾದಕ್ಕೆ ಆಯ್ದುಕೊಂಡ ಕೃತಿಯ ಕನಿಷ್ಠ 5ಪುಟಗಳನ್ನು ಕನ್ನಡಕ್ಕೆ ಅನುವಾದಿಸಿ ಮೂಲ ಭಾಷೆಯ ಪಠ್ಯದೊಂದಿಗೆ ಅಂಚೆ, ಕೋರಿಯರ್ ಮೂಲಕ ಪ್ರಾಧಿಕಾರಕ್ಕೆ ಕಳುಹಿಸಿಕೊಡಬೇಕು. ಅರ್ಜಿ ಸಲ್ಲಿಸಲು ಮಾ.10 ಕೊನೆಯ ದಿನವಾಗಿರುತ್ತದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News