×
Ad

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಬಿಜೆಪಿ ಹೈಕಮಾಂಡ್ ನಿಂದ ಶೋಕಾಸ್ ನೋಟಿಸ್

Update: 2021-02-12 15:14 IST

ಬೆಂಗಳೂರು, ಫೆ.12: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ರಾಜ್ಯ ಸರಕಾರದ ವಿರುದ್ಧ ಬಹಿರಂಗವಾಗಿ ಟೀಕೆ ಮಾಡುತ್ತಿದ್ದ ಬಿಜೆಪಿ ಮುಖಂಡ, ವಿಜಯಪುರ ನಗರ ಕ್ಷೇತ್ರದ ಶಾಸಕ, ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಬಿಜೆಪಿ ಹೈಕಮಾಂಡ್ ಶೋಕಾಸ್ ನೋಟಿಸ್ ನೀಡಿದೆ ಎಂದು ತಿಳಿದುಬಂದಿದೆ.

ಸಚಿವ ಸಂಪುಟದಲ್ಲಿ ಸ್ಥಾನ ಸಿಗದ ಕಾರಣ ಮತ್ತು ಕ್ಷೇತ್ರದ ಅಭಿವೃದ್ಧಿಗೆ ಸಮರ್ಪಕವಾಗಿ ಅನುದಾನ ನೀಡುತ್ತಿಲ್ಲ ಎಂದು  ಬಸನಗೌಡ ಪಾಟೀಲ್ ಯತ್ನಾಳ್ ಅವರು ಯಡಿಯೂರಪ್ಪ ವಿರುದ್ಧ ಪದೇಪದೇ ಹೇಳಿಕೆಗಳನ್ನು ನೀಡುತ್ತಿದ್ದರು. ಅಲ್ಲದೆ, 'ಸಿಎಂ ಬದಲಾವಣೆ ಮಾಡಲಾಗುತ್ತದೆ, ಉತ್ತರ ಕರ್ನಾಟಕ ಭಾಗದವರು ಮುಂದಿನ ಸಿಎಂ ಆಗಲಿದ್ದಾರೆ’ ಎಂದು ಹೇಳಿಕೆ ನೀಡುವ ಮೂಲಕ ಸರಕಾರ ಮತ್ತು ಪಕ್ಷಕ್ಕೆ ತೀವ್ರ ಮುಜುಗರ ಉಂಟು ಮಾಡುತ್ತಿದ್ದರು.

ಸಂಪುಟ ವಿಸ್ತರಣೆಯ ವೇಳೆ ಅಸಮಾಧಾನಗೊಂಡಿದ್ದ ಬಸನಗೌಡ ಪಾಟೀಲ್ ಯತ್ನಾಳ್ ‘ಸಿ.ಡಿ.’ ಬಾಂಬ್ ಹಾಕಿದ್ದರು. ಇದು ರಾಜಕೀಯದಲ್ಲಿ ದೊಡ್ಡ ಚರ್ಚೆಗೂ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಯತ್ನಾಳ್ ವಿರುದ್ಧ ಬಿಜೆಪಿ ಶಿಸ್ತು ಸಮಿತಿಗೆ ಶಿಫಾರಸು ಮಾಡಿದ್ದರು. ಅದರಂತೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಶೋಕಾಸ್ ನೋಟಿಸ್ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News