ಪುತ್ತಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಪ್ರವೀಣ್ ಶೆಟ್ಟಿ, ಉಪಾಧ್ಯಕ್ಷರಾಗಿ ತಾಹೀರಾ ಆಯ್ಕೆ

Update: 2021-02-12 13:52 GMT
ಪ್ರವೀಣ್ ಶೆಟ್ಟಿ,  ತಾಹೀರಾ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಪ್ರವೀಣ್ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ಎಸ್‌ಡಿಪಿಐ ಬೆಂಬಲಿತ ಸದಸ್ಯೆ ತಾಹೀರಾ ಅವರು ಶುಕ್ರವಾರ ಆಯ್ಕೆಯಾಗಿದ್ದಾರೆ. 

ಪ್ರವೀಣ್ ಶೆಟ್ಟಿ ಅವರು 11 ಮತಗಳನ್ನು ಪಡೆದಿದ್ದು, ಅವರ ಪ್ರತಿಸ್ಪರ್ಧಿ ಬಿಜೆಪಿ ಬೆಂಬಲಿತ ದಿನೇಶ್ ಅವರು 10 ಮತಗಳನ್ನು ಪಡೆದಿದ್ದಾರೆ. ತಾಹೀರಾ ಅವರು 11 ಮತಗಳನ್ನು ಪಡೆದು ಗೆಲುವು ಸಾಧಿಸಿದರೆ, ಅವರ ಪ್ರತಿಸ್ಪರ್ಧಿ ಬಿಜೆಪಿ ಬೆಂಬಲಿತ ಸದಸ್ಯೆ ಸೌಮ್ಯ ಪ್ರಸನ್ನ ಅವರು 10 ಮತಗಳನ್ನು ಪಡೆದಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News