ಬಿಡಿಎ ಭ್ರಷ್ಟಾಚಾರ: ತನಿಖೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಆಗ್ರಹ

Update: 2021-02-12 14:00 GMT

ಬೆಂಗಳೂರು, ಫೆ. 12: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಂತ ಪ್ರತಿಷ್ಠಿತ ಸಂಸ್ಥೆಯಲ್ಲಿನ ಹಗರಣದ ಕುರಿತು ಸೂಕ್ತ ತನಿಖೆಯನ್ನು ನಡೆಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಆಗ್ರಹಿಸಿದ್ದಾರೆ.

ಶುಕ್ರವಾರ ಈ ಸಂಬಂಧ ಸಿಎಂಗೆ ಪತ್ರ ಬರೆದಿರುವುದು ಸಲೀಂ ಅಹ್ಮದ್, ಪ್ರತಿಷ್ಠಿತ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಬಿಡಿಎಯಲ್ಲಿ ಇತ್ತೀಚಿನ ದಿನಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿರುವ ಸುದ್ದಿಗಳು ಬರುತ್ತಿವೆ. ಈ ಮಧ್ಯೆ ಬಿಡಿಎ ಅಧ್ಯಕ್ಷ ಹಾಗೂ ಆಯುಕ್ತರ ನಡುವೆ ಪರಸ್ಪರ ಗುದ್ದಾಟ ಬೀದಿ ಜಗಳದ ಸ್ವರೂಪ ಪಡೆದುಕೊಂಡಿದೆ. ಹೀಗಾಗಿ ಬಿಡಿಎ ಮೇಲಿನ ವಿಶ್ವಾಸ ಕಳೆದುಕೊಳ್ಳುವಂತೆ ಆಗಿದೆ. ಆದುದರಿಂದ ಈ ಬಗ್ಗೆ ತನಿಖೆ ಅಗತ್ಯವಿದೆ ಎಂದು ಅವರು ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News