ಇಂದಿನಿಂದ ರಜಬ್ ತಿಂಗಳಾರಂಭ
Update: 2021-02-12 19:56 IST
ಮಂಗಳೂರು, ಫೆ.13: ಇಂದು(ಫೆ.12) ರಜಬ್ ತಿಂಗಳ ಪ್ರಥಮ ಚಂದ್ರದರ್ಶನವಾಗಿದೆ. ಆದ್ದರಿಂದ ಶುಕ್ರವಾರ ಅಸ್ತಮಿಸಿದ ಶನಿವಾರ ರಾತ್ರಿ ರಜಬ್ 1 ಆಗಿದ್ದು, ಮಾರ್ಚ್ 11ರಂದು ಶಬೇ ಮಿಅ್ ರಾಜ್ ಆಗಿರುತ್ತದೆ ಎಂದು ದ.ಕ. ಜಿಲ್ಲಾ ಖಾಝಿ ಶೈಖುನಾ ಅಲ್ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ, ಉಡುಪಿ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಸಂಯುಕ್ತ ಜಮಾಅತ್ ಖಾಝಿ ಝೈನುಲ್ ಉಲಮಾ ಎಂ.ಅಬ್ದುಲ್ ಹಮೀದ್ ಮುಸ್ಲಿಯಾರ್ ಹಾಗೂ ಖಾಝಿ ಸೈಯದ್ ಫಝಲ್ ಕೋಯಮ್ಮ ತಂಙಳ್ ಕೂರತ್ ತೀರ್ಮಾನಿಸಿರುವುದಾಗಿ ಪ್ರಕಟನೆ ತಿಳಿಸಿದೆ.