×
Ad

ಮಂಗಳೂರು: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ಮೃತ್ಯು

Update: 2021-02-12 22:07 IST

ಮಂಗಳೂರು, ಫೆ.12: ನಗರದ ಬಿಜೈಯಲ್ಲಿ ನಿರ್ಮಾಣ ಹಂತದ ಕಟ್ಟಡವೊಂದರ ಏಳನೇ ಮಹಡಿಯಿಂದ ಬಿದ್ದು, ಉತ್ತರ ಭಾರತದ ಕಾರ್ಮಿಕರೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.

ಸದ್ದಾಂ ಹುಸೇನ್ (30) ಶುಕ್ರವಾರ ಸಂಜೆ ವೇಳೆಗೆ ಕಟ್ಟಡದ ಏಳನೇ ಮಹಡಿಯಲ್ಲಿ ಬಾಲ್ಕನಿಯ ಕೆಲಸ ಪೂರ್ಣಗೊಳಿಸಿ ಕೆಳಗೆ ಇಳಿಯುತ್ತಿದ್ದಾಗ ಆಕಸ್ಮಿಕವಾಗಿ ಜಾರಿ ನೆಲಕ್ಕೆ ಬಿದ್ದಿದ್ದಾರೆ.

ಗಂಭೀರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಅಷ್ಟರಲ್ಲಿ ಮೃತಪಟ್ಟಿದ್ದರು. ಉರ್ವ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದಾರೆ. ಯಾವುದೇ ಸುರಕ್ಷತಾ ಕ್ರಮ ಅನುಸರಿಸದೆ ಕಾಮಗಾರಿ ನಡೆಸಿ, ಕಾರ್ಮಿಕನ ಸಾವಿಗೆ ಕಾರಣರಾಗಿದ್ದಾರೆನ್ನಲಾದ ಕಂಟ್ರಾಕ್ಟರ್‌ದಾರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News