×
Ad

ದಿಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಕಂಪನ

Update: 2021-02-12 23:02 IST

ಹೊಸದಿಲ್ಲಿ:ದಿಲ್ಲಿ ಹಾಗೂ ಅದರ ಸುತ್ತಮುತ್ತ ಪ್ರದೇಶಗಳಲ್ಲಿ ಶುಕ್ರವಾರ ರಾತ್ರಿ 10:34ರ ಸುಮಾರಿಗೆ ಕೆಲವು ಸೆಕೆಂಡ್ ಗಳ ಕಾಲ ಭೂಕಂಪಿಸಿರುವ ಘಟನೆ ವರದಿಯಾಗಿದ್ದು, ಜನರು ಭೀತಿಯಿಂದ ತಮ್ಮ ಮನೆಯಿಂದ ಹೊರಗೆ ಓಡಿ ಬಂದಿರುವುದಾಗಿ ತಿಳಿದುಬಂದಿದೆ.

ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 6.1ರಷ್ಟಿತ್ತು. ಪಂಜಾಬ್ ನ ಅಮೃತಸರದಿಂದ 21 ಕಿ.ಮೀ, ದೂರದಲ್ಲಿ ಭೂಕಂಪನದ ಕೇಂದ್ರ ಬಿಂದುವಾಗಿತ್ತು  ಎಂದು ಭಾರತೀಯ ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.

 ಜಮ್ಮು-ಕಾಶ್ಮೀರ, ಪಂಜಾಬ್, ಹರ್ಯಾಣ, ಉತ್ತರಪ್ರದೇಶ, ಉತ್ತರಾಖಂಡ ಹಾಗೂ ರಾಜಸ್ಥಾನದಲ್ಲೂ ಭೂಕಂಪನದ ಅನುಭವವಾಗಿದ್ದಾಗಿ ವರದಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News