2020-21ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Update: 2021-02-12 18:12 GMT

ಬೆಂಗಳೂರು, ಫೆ.12: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2020-21ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಹೊಸದಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ಕುರಿತಂತೆ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರು ರಾಜ್ಯದ ಎಲ್ಲಾ ಜಿಲ್ಲೆಗಳ ಜಂಟಿ, ಉಪ ನಿರ್ದೇಶಕರಿಗೆ ಪತ್ರದಲ್ಲಿ ತಿಳಿಸಿದ್ದು, ವಿದ್ಯಾರ್ಥಿವೇತನ ಕೋರಿ ಅರ್ಜಿ ಸಲ್ಲಿಸಲು ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಅರ್ಜಿ ಸಲ್ಲಿಸಲು ಮಾ.15 ಕೊನೆಯ ದಿನವಾಗಿರುತ್ತದೆ ಎಂದು ತಿಳಿಸಲಾಗಿದೆ.

ಇದುವರೆಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಕಾರ್ಯಕ್ರಮದಡಿ 6,028 ಅರ್ಜಿಗಳು ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮದಡಿ 6,832 ವಿದ್ಯಾರ್ಥಿಗಳು ಖಾತೆಯನ್ನು ಸೃಜಿಸಿದ್ದು, 213 ವಿದ್ಯಾರ್ಥಿಗಳು ಅರ್ಜಿಗಳು ತಂತ್ರಾಂಶದಲ್ಲಿ ಸ್ವೀಕೃತಗೊಂಡಿರುತ್ತದೆ ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News