9 ಜಿಲ್ಲಾಧಿಕಾರಿಗಳು ಸೇರಿ 42 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ರಾಜ್ಯ ಸರಕಾರ

Update: 2021-02-13 13:58 GMT

ಬೆಂಗಳೂರು, ಫೆ.13: ರಾಜ್ಯ ಸರಕಾರವು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಒಂಭತ್ತು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಆಧಿಕಾರಿಗಳು ಸೇರಿದಂತೆ 42 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶನಿವಾರ ಆದೇಶ ಹೊರಡಿಸಿದೆ.

ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ತುಷಾರ್ ಗಿರಿನಾಥ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವಿ.ರಶ್ಮಿ ಮಹೇಶ್, ಕನ್ನಡ ಮತ್ತು ಸಂಸೃತಿ ಇಲಾಖೆಯ ಕಾರ್ಯದರ್ಶಿ- ಡಾ.ಜೆ.ರವಿಶಂಕರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಾಗಿ ಡಾ.ಕೆ.ವಿ.ತ್ರಿಲೋಕ್ ಚಂದ್ರ ಅವರನ್ನು ನೇಮಿಸಿದೆ.

ಜಲಾನಯನ ಪ್ರದೇಶಾಭಿವೃದ್ಧಿ ಇಲಾಖೆಯ ಆಯುಕ್ತ-ಡಾ.ಎಂ.ವಿ.ವೆಂಕಟೇಶ್, ವಾಣಿಜ್ಯ ತೆರಿಗೆಯ ಇಲಾಖೆಯ ಹೆಚ್ಚುವರಿ ಆಯುಕ್ತ- ಡಾ.ಬಗಾದಿ ಗೌತಮ್, ರಾಜ್ಯ ರೇಷ್ಮೆ ಕೈಗಾರಿಕೆ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿ ಎಂ.ಕನಗವಲ್ಲಿ, ರಾಜ್ಯ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ-ಡಾ.ವಿ.ರಾಮ್‍ಪ್ರಸಾದ್ ಮನೋಹರ್.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಜಂಟಿ ಕಾರ್ಯದರ್ಶಿ-ಆರ್.ವೆಂಕಟೇಶ್ ಕುಮಾರ್, ಕಬ್ಬು ಅಭಿವೃದ್ಧಿ ಆಯುಕ್ತ ಹಾಗೂ ಸಕ್ಕರೆ ನಿರ್ದೇಶಕ- ಜಿ.ಎನ್.ಶಿವಮೂರ್ತಿ, ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿ ಜೆ.ಮಂಜುನಾಥ್, ರಾಜ್ಯ ಸಾರ್ವಜನಿಕ ಭೂ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿ ಡಾ.ಬಿ.ಆರ್.ಮಮತಾ ಅವರನ್ನು ವರ್ಗಾವಣೆ ಮಾಡಿದೆ.

ರಾಜ್ಯ ನಗರ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮದ ಜಂಟಿ ವ್ಯವಸ್ಥಾಪಕ ನಿರ್ದೇಶಕಿ- ಹೆಫ್ಸಿಬಾ ರಾಣಿ ಕೊರ್ಲಾಪಟಿ, ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ-ಡಾ.ರಾಕೇಶ್ ಕುಮಾರ್, ಕೋಲಾರ ಜಿಲ್ಲಾಧಿಕಾರಿ-ಡಾ.ಸೆಲ್ವಮಣಿ ಆರ್., ಮಂಡ್ಯ ಜಿಲ್ಲಾಧಿಕಾರಿ-ಅಶ್ವಥಿ, ಉತ್ತರ ಕನ್ನಡ ಜಿಲ್ಲಾಧಿಕಾರಿ-ಮುಲ್ಲೈ ಮುಹಿಲನ್, ರಾಯಚೂರು ಜಿಲ್ಲಾಧಿಕಾರಿಯಾಗಿ ವೆಂಕಟ್ ರಾಜಾ, ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ-ಗುರುದತ್ತ ಹೆಗ್ಡೆ, ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ವ್ಯವಸ್ಥಾಪಕ ನಿರ್ದೇಶಕ-ಲಕ್ಷ್ಮಿಕಾಂತ್ ರೆಡ್ಡಿ ಜಿ., ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ(ಸೇವೆ)ಯ ಉಪ ಕಾರ್ಯದರ್ಶಿಯಾಗಿ ಡಾ.ಆನಂದ್ ಕೆ.

ಮೈಸೂರಿನ ಆಡಳಿತ ತರಬೇತಿ ಕೇಂದ್ರದ ಜಂಟಿ ನಿರ್ದೇಶಕ(ತರಬೇತಿ)-ಜ್ಞಾನೇಂದ್ರ ಕುಮಾರ್ ಗಂಗವಾರ್, ಗದಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ-ಭರತ್ ಎಸ್., ಚಾಮರಾಜನಗರ ಜಿಲ್ಲಾಧಿಕಾರಿ-ಡಾ.ಬಿ.ಸಿ.ಸತೀಶ, ಸಕಾಲ ಯೋಜನೆಯ ಹೆಚ್ಚುವರಿ ಯೋಜನಾ ನಿರ್ದೇಶಕ-ಡಾ.ರವಿ ಎಂ.ಆರ್., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರಾಗಿ ಪಿ.ಎನ್.ರವೀಂದ್ರ.

ಮೈಸೂರಿನ ಆಡಳಿತ ತರಬೇತಿ ಕೇಂದ್ರದ ಜಂಟಿ ನಿರ್ದೇಶಕ(ಆಡಳಿತ)ಕರೀಗೌಡ, ಉದ್ಯೋಗ ಮತ್ತು ತರಬೇತಿ ಇಲಾಖೆಯ ಆಯುಕ್ತ-ಡಾ.ಕೆ.ಹರೀಶ್ ಕುಮಾರ್, ಚಿಕ್ಕಮಗಳೂರು ಜಿಲ್ಲಾಧಿಕಾರಿ-ಕೆ.ಎನ್.ರಮೇಶ್, ತುಮಕೂರು ಜಿಲ್ಲಾಧಿಕಾರಿ-ಪಾಟೀಲ್ ಯಲಗೌಡ ಶಿವನಗೌಡ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ಕೆ.ಶ್ರೀನಿವಾಸ್ ಅವರನ್ನು ಅವರನ್ನು ನೇಮಿಸಿದೆ.

ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ- ಸಿ.ಸತ್ಯಭಾಮಾ, ಬೀದರ್ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ- ಝೆಹ್ರಾ ನಸೀಮ್, ದಾವಣಗೆರೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ-ವಿಜಯ್ ಮಹಾಂತೇಶ್ ಬಿ.ದಾನಮ್ಮನವರ್, ವಿಜಯಪುರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಗೋವಿಂದ ರೆಡ್ಡಿ.

ಕೃಷಿ ಮಾರುಕಟ್ಟೆ ಮಂಡಳಿಯ ನಿರ್ದೇಶಕಿ-ಭಾರತಿ ಡಿ., ಹಟ್ಟಿ ಚಿನ್ನದ ಗಣಿ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ-ಪ್ರಭುಲಿಂಗ ಕಾವಲಿಕಟ್ಟಿ, ತುಮಕೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ-ಗಂಗಾಧರ ಸ್ವಾಮಿ ಜಿ.ಎಂ., ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನಾಗೇಂದ್ರ ಪ್ರಸಾದ್ ಕೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕುಮಾರ, ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸಂಗಪ್ಪ ಹಾಗೂ ಹಾಸನ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನಾಗಿ ಪರಮೇಶ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News