ದಕ್ಷಿಣ ಕನ್ನಡ ಜಿಲ್ಲೆಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇಮಕ

Update: 2021-02-13 14:22 GMT

ಬೆಂಗಳೂರು, ಫೆ.13: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಶಿಫಾರಸ್ಸಿನ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಸುಳ್ಯ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಗೊಳಪಡುವ ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿಗೆ ಪಿ.ಸಿ.ಜಯರಾಮ್, ಕಡಬ ಬ್ಲಾಕ್ ಕಾಂಗ್ರೆಸ್ ಸಮಿತಿಗೆ ಸುಧೀರ್ ಕುಮಾರ್ ಶೆಟ್ಟಿಯನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಗೆ ಪ್ರಕಾಶ್ ಬಿ.ಸಾಲಿಯಾನ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಗೆ ಕೆ.ಶೈಲೇಶ್ ಕುಮಾರ್, ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್‍ಗೆ ರಂಜನ್ ಜಿ.ಗೌಡ, ಪುತ್ತೂರು ವಿಧಾನಸಭಾ ಕ್ಷೇತ್ರದ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿಗೆ ಡಾ.ರಾಜಾರಾಮ್ ಕೆ.ಬಿ. ಅವರನ್ನು ನೇಮಕ ಮಾಡಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News