ಮಂಗಳೂರಲ್ಲಿ ಕೊಕೇನ್ ಮಾರಾಟಕ್ಕೆ ಯತ್ನ: ಆರೋಪಿ ಬಂಧನ

Update: 2021-02-13 16:50 GMT

ಮಂಗಳೂರು, ಫೆ.13: ನಗರದ ಬಿಜೈ ಕೆಎಸ್‌ಆರ್‌ಟಿಸಿ ಸಮೀಪ ಮಾದಕ ವಸ್ತು ಕೊಕೇನ್ ಮಾರಾಟಕ್ಕೆ ಯತ್ನಿಸಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಬೋಳಾರದ ಸುಪ್ರೀತ್ (35) ಬಂಧಿತ ಆರೋಪಿ.

ಈತನನ್ನು ಇಕೊನಾಮಿಕ್ ಆ್ಯಂಡ್ ನಾರ್ಕೋಟಿಕ್ ಅಪರಾಧ ಠಾಣೆ ಪೊಲೀಸರು ಶನಿವಾರ ಬಂಧಿಸಿ, ಒಟ್ಟು 2.37 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯಿಂದ 2 ಲಕ್ಷ ರೂ. ಮೌಲ್ಯದ 21.13 ಗ್ರಾಂ ಕೊಕೇನ್, 35 ಸಾವಿರ ರೂ. ಮೌಲ್ಯದ 2 ಮೊಬೈಲ್, 2 ಸಾವಿರ ರೂ. ನಗದು ವಶಪಡಿಸಿಕೊಂಡಿದ್ದಾರೆ. ಇನ್‌ಸ್ಪೆಕ್ಟರ್ ರಾಮಕೃಷ್ಣ ಕೆ.ಕೆ. ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News