×
Ad

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಪಿ.ಸಿ.ಜಯರಾಮ ನೇಮಕ

Update: 2021-02-14 00:09 IST

ಸುಳ್ಯ: ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ಮುಖಂಡ ಪಿ.ಸಿ.ಜಯರಾಮ ಅವರು ನೇಮಕಗೊಂಡಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಪಿ.ಸಿ.ಜಯರಾಮ ಅವರನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ ಮಾಡಿ ಆದೇಶ ಮಾಡಿದ್ದಾರೆ.

ಕರ್ನಾಟಕ ಅರೆಭಾಷೆ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಪಿ.ಸಿ.ಜಯರಾಮ ತಾಲೂಕು ಪಂಚಾಯಿತಿ ಸದಸ್ಯರಾಗಿ, ಉಪಾಧ್ಯಕ್ಷರಾಗಿ ದುಡಿದಿದ್ದಾರೆ. ಸಹಕಾರಿ ಕ್ಷೇತ್ರದಲ್ಲಿ ಸಕ್ರೀಯರಾಗಿರುವ ಅವರು ಸುಳ್ಯದ ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿದ್ದಾರೆ.

ಮಡಪ್ಪಾಡಿ ಸಹಕಾರ ಸಂಘದ ಅಧ್ಯಕ್ಷರಾಗಿದ್ದಾರೆ. ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜಯಪ್ರಕಾಶ್ ರೈ ಅವರ ಅವಧಿ ಮುಗಿದ ಹಿನ್ನಲೆಯಲ್ಲಿ ಹೊಸ ಬ್ಲಾಕ್ ಅಧ್ಯಕ್ಷರ ನೇಮಕ ಆಗಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News