ಮಂಗಳೂರು: ಪುಲ್ವಾಮ ಹುತಾತ್ಮ ಸೈನಿಕರಿಗೆ ಬಿಜೆಪಿಯಿಂದ ಗೌರವಾರ್ಪಣೆ
ಮಂಗಳೂರು, ಫೆ.14: ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಸೈನಿಕರಿಗೆ ಗೌರವಾರ್ಪಣೆ ಹಾಗೂ ಪುಷ್ಪ ನಮನ ಕಾರ್ಯಕ್ರಮ ಇಂದು ಬೆಳಗ್ಗೆ ಕದ್ರಿಯಲ್ಲಿರುವ ಸೈನಿಕರ ಸ್ಮಾರಕದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಮಾನ್ಯ ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು, ಮಂಗಳೂರು ನಗರ ದಕ್ಷಿಣ ಮಂಡಲದ ಅಧ್ಯಕ್ಷ ವಿಜಯ್ ಕುಮಾರ್ ಶೆಟ್ಟಿ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ, ಮನಪಾ ಮೇಯರ್ ದಿವಾಕರ್ ಪಾಂಡೇಶ್ವರ, ಮಂಗಳೂರು ದಕ್ಷಿಣ ಉಪಾಧ್ಯಕ್ಷ ರಮೇಶ್ ಕಂಡೆಟ್ಟು, ಬಿಜೆಪಿ ಮಂಗಳೂರು ನಗರ ದಕ್ಷಿಣ ಪ್ರಧಾನ ಕಾರ್ಯದರ್ಶಿ ರೂಪಾ ಡಿ. ಬಂಗೇರ, ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ಬಿಜೆಪಿ ರಾಜ್ಯ ವಕ್ತಾರ ಕ್ಯಾ.ಗಣೇಶ್ ಕಾರ್ಣಿಕ್, ಜಿಲ್ಲಾ ವಕ್ತಾರ ಹಾಗೂ ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ನಿವೃತ ಸೈನಿಕರ ಸಂಘದ ಕಾರ್ಯದರ್ಶಿ ಕ್ಯಾ.ದೀಪಕ್ ಅಡ್ಯಂತಾಯ, ಮನಪಾ ಸದಸ್ಯ, ದಕ್ಷಿಣ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಕಿರಣ್ ರೈ, ಪಶ್ಚಿಮ ಮಹಾಶಕ್ತಿ ಕೇಂದ್ರ ಅಧ್ಯಕ್ಷ ದೀಪಕ್ ಪೈ, ಉತ್ತರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರಮೇಶ್ ಹೆಗ್ಡೆ, ಪೂರ್ವ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಅಜಯ್ ಕುಲಶೇಖರ್ ಮೊದಲಾದವರು ಉಪಸ್ಥಿತರಿದ್ದರು.
ಇದೆ ವೇಳೆ ಸೈನಿಕ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.