×
Ad

ಭಾಷಣದ ವೇಳೆ ಕುಸಿದು ಬಿದ್ದ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ

Update: 2021-02-14 21:43 IST

ಅಹಮದಾಬಾದ್: ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ರವಿವಾರ ಸಂಜೆ ವಡೋದರಾದಲ್ಲಿ ಭಾಷಣ ಮಾಡುವಾಗ ವೇದಿಕೆಯಲ್ಲಿ ಕುಸಿದು ಬಿದ್ದ ಘಟನೆ ನಡೆದಿದೆ. ಸದ್ಯ ಅವರನ್ನು ಸರ್ಕಾರಿ ವಿಮಾನದ ಮೂಲಕ ಅಹಮದಾಬಾದ್‌ಗೆ ಕರೆದೊಯ್ಯಲಾಗುತ್ತಿದೆ ಎಂದು India today.in ವರದಿ ತಿಳಿಸಿದೆ.

ಸಿಎಂ ವಿಜಯ್ ರೂಪಾನಿ ಅವರ ಆರೋಗ್ಯ ಈಗ ಸ್ಥಿರವಾಗಿದೆ ಮತ್ತು ಕಡಿಮೆ ರಕ್ತದೊತ್ತಡ ಹಾಗೂ ಮಧುಮೇಹದ ಕಾರಣದಿಂದ ಅವರು ಮೂರ್ಛೆ ಹೋಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾಗಿ ವರದಿ ತಿಳಿಸಿದೆ

ವಿಜಯ್ ರೂಪಾನಿಯನ್ನು ಅಹಮದಾಬಾದ್‌ನ ಯುಎನ್ ಮೆಹ್ತಾ ಆಸ್ಪತ್ರೆಗೆ ಕರೆದೊಯ್ಯಲಾಗುವುದು, ಅಲ್ಲಿ ವೈದ್ಯರು ಮುನ್ನೆಚ್ಚರಿಕೆಯಾಗಿ ಸಂಪೂರ್ಣ ವೈದ್ಯಕೀಯ ತಪಾಸಣೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News