ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಗೆ ಸಿಎಂ ಯಡಿಯೂರಪ್ಪ ಚಾಲನೆ

Update: 2021-02-15 06:54 GMT

ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಗೆ ಶಿವಮೊಗ್ಗದಲ್ಲಿ ವರ್ಚುವಲ್ ಕಾರ್ಯಕ್ರಮದಲ್ಲಿ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, 220 ಕೋಟಿ ರೂಪಾಯಿ ವೆಚ್ಚದಲ್ಲಿ ವಿಜಯಪುರ ವಿಮಾನ‌ ನಿಲ್ದಾಣವನ್ನು ಎರಡು ಹಂತದಲ್ಲಿ‌ ಅಭಿವೃದ್ಧಿ ಪಡಿಸಲಾಗಿದೆ. ಸಾರ್ವಜನಿಕ ಸಹಭಾಗಿತ್ವದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ನಡೆಸಲಾಗುತ್ತಿದೆ ಎಂದರು.

ಉಡಾನ್ ಯೋಜನೆಯಡಿ ವಿಮಾನ‌ ಹಾರಾಟಕ್ಕೆ ಕ್ರಮವಹಿಸಲಾಗುತ್ತಿದೆ. ಏರ್ ಬಸ್ 320 ಹಾರಾಟಕ್ಕೆ ಅನುಕೂಲವಾಗುವಂತೆ ವಿಜಯಪುರ ವಿಮಾನ ನಿಲ್ದಾಣ ಅಭಿವೃದ್ಧಿ ಪಡಿಸಲಾಗುತ್ತಿದೆ. ಶಿವಮೊಗ್ಗ ವಿಮಾನ‌ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.

ಲೋಕಸಬಾ ಸದಸ್ಯ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ಶಾಸಕ ಅರಗ ಜ್ಞಾನೇಂದ್ರ, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ಎಸ್. ಸೆಲ್ವಕುಮಾರ್, ಜಿಲ್ಲಾಧಿಕಾರಿ ಶಿವಕುಮಾರ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ವಿಜಯಪುರದಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಂಸದ ರಮೇಶ ಜಿಗಜಿಣಗಿ, ಶಾಸಕ ದೇವಾನಂದ ಚೌವ್ಹಾಣ್ ಉಪಸ್ಥಿತರಿದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News