ಉದ್ಯಾವರ ಗ್ರಾಪಂ ಅಧ್ಯಕ್ಷರಾಗಿ ರಾಧಾಕೃಷ್ಣ, ಉಪಾಧ್ಯಕ್ಷರಾಗಿ ಮಧುಲತಾ ಆಯ್ಕೆ
ಉಡುಪಿ, ಫೆ.16: ಉದ್ಯಾವರ ಗ್ರಾಪಂ ಮೊದಲ ಬಾರಿಗೆ ಬಿಜೆಪಿ ತೆಕ್ಕೆಗೆ ಬಿದ್ದಿದೆ. ಅಧ್ಯಕ್ಷರಾಗಿ ಹಿರಿಯ ಸದಸ್ಯ ರಾಧಾಕೃಷ್ಣ ಶ್ರೀಯಾನ್ ಬೊಳ್ಜೆ ಹಾಗೂ ಮೀಸಲಾತಿಯಿಂದಾಗಿ ಕಾಂಗ್ರೆಸ್ ಬೆಂಬಲಿತ ಮಧುಲತಾ ಶಶಿಧರ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದರು.
ಉದ್ಯಾವರ ಗ್ರಾಪಂನ 30 ಸ್ಥಾನಗಳ ಪೈಕಿ ಬಿಜೆಪಿ 15, ಕಾಂಗ್ರೆಸ್ 13 ಮತ್ತು ಪಕ್ಷೇತರರು ಎರಡು ಸ್ಥಾನಗಳಲ್ಲಿ ಜಯಗಳಿಸಿದ್ದರು. ಅಧ್ಯಕ್ಷ ಸ್ಥಾನಕ್ಕೆ ಎರಡೂ ಪಕ್ಷಗಳಲ್ಲಿ ಮಧ್ಯೆ ತೀವ್ರ ಪೈಪೋಟಿ ಇದ್ದು, ಕೊನೆಯ ಕ್ಷಣದಲ್ಲಿ ಇಬ್ಬರು ಪಕ್ಷೇತರರು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡರು.
ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ರಾಧಾಕೃಷ್ಣ ಬೊಟ್ಟೆ ಮತ್ತು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಮಿತೇಶ್ ಸುವರ್ಣ ನಾಮಪತ್ರ ಸಲ್ಲಿಸಿದ್ದರು. ಮಧ್ಯಾಹ್ನದ ಬಳಿಕ ನಡೆದ ಮತದಾನದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ರಾಧಕೃಷ್ಣ ಶ್ರೀಯಾನ್ 17 ಮತಗಳನ್ನು ಪಡೆದರೆ, ಕಾಂಗ್ರೆಸ್ ಬೆಂಬಲಿತ ಮಿತೇಶ್ ಸುವರ್ಣ 13 ಮತಗಳನ್ನು ಪಡೆದರು.