ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಇಎಸ್‌ಐ ಸೌಲಭ್ಯಗಳ ಪುನರಾರಂಭ
Update: 2021-02-15 18:56 IST
ಉಡುಪಿ, ಫೆ.15: ಕಳೆದ ಹಲವು ತಿಂಗಳುಗಳಿಂದ ಸ್ಥಗಿತಗೊಂಡಿದ್ದ ಕಾರ್ಮಿಕರ ರಾಜ್ಯ ವಿಮಾ ಯೋಜನೆ (ಇಎಸ್‌ಐಎಸ್) ಸೌಲಭ್ಯಗಳನ್ನುಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಫೆ.15ರಿಂದ ಜಾರಿಗೆ ಬರುವಂತೆ ಪುನರಾರಂಭಿಸಲಾಗಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಪ್ರಕಟಿಸಿದ್ದಾರೆ.
ಇದರಿಂದ ಈಗ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಎಲ್ಲಾ ಸೂಪರ್ ಸ್ಪೆಷಾಲಿಟಿ ಮತ್ತು ಜನರಲ್ ಸ್ಪೆಷಾಲಿಟಿ (ಕಾರ್ಮಿಕರ ರಾಜ್ಯ ವಿಮಾ ಯೋಜನೆ) ಲಭ್ಯವಿದೆ. ಇಎಸ್‌ಐ ಫಲಾನುಭವಿಗಳು ಈ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುಂತೆ ಡಾ.ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.