ಗೋಹತ್ಯೆ ನಿಷೇಧ ಕಾಯ್ದೆಗೆ ರಾಜ್ಯಪಾಲರ ಅಂಕಿತ

Update: 2021-02-15 16:07 GMT

ಬೆಂಗಳೂರು, ಫೆ,15: ಕರ್ನಾಟಕ ಜಾನುವಾರು ಹತ್ಯೆ ನಿಷೇಧ ಮತ್ತು ಸಂರಕ್ಷಣಾ ಅಧಿನಿಯಮ-2021ಕ್ಕೆ ರಾಜ್ಯಪಾಲ ವಜೂಭಾಯಿ ವಾಲಾ ಅವರು ಅಂಕಿತ ಹಾಕಿದ್ದಾರೆ.

ಈ ಸಂಬಂಧ ಕರ್ನಾಟಕ ರಾಜ್ಯಪತ್ರ' ಹೊರಡಿಸಲಾಗಿದ್ದು, ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಬರಲಿದೆ. ಈ ಸಂಬಂಧ ಪಶು ಸಂಗೋಪನೆ ಮತ್ತು ಕಾನೂನು ಇಲಾಖೆ ನಿಯಮಗಳನ್ನು ರೂಪಿಸಿ, ಕಾನೂನು ಅನುಷ್ಠಾನಕ್ಕೆ ಕ್ರಮ ವಹಿಸಲಿವೆ.

ಈ ಹಿಂದೆ ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ ಮಾಡಲಾಗಿತ್ತು. ಆದರೆ, ವಿಧಾನ ಪರಿಷತ್ ನಲ್ಲಿ ವಿಧೇಯಕ ಮಂಡನೆ ಸಾಧ್ಯವಾಗಿರಲಿಲ್ಲ.

ಈ ಮಧ್ಯೆ ವಿಧಾನ ಮಂಡಲ ಜಂಟಿ ಅಧಿವೇಶನ ದ ಕೊನೆಯ ದಿನ ನೂತನ ಸಭಾಪತಿ ಆಯ್ಕೆಗೂ ಮೊದಲೇ, ಪ್ರತಿಪಕ್ಷಗಳ ವಿರೋಧದ ಮಧ್ಯೆ ತರಾತುರಿಯಲ್ಲಿ ವಿಧೇಯಕ ಮಂಡಿಸಿ ಚರ್ಚೆ ಇಲ್ಲದೆ ಅಂಗೀಕಾರ ಮಾಡಲಾಗಿತ್ತು. ಇದೀಗ ಕಾಯ್ದೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News