ಉಡುಪಿ: ಸಂತ ಸೇವಾಲಾಲ್ ಜಯಂತಿ ಆಚರಣೆ
Update: 2021-02-15 21:39 IST
ಉಡುಪಿ, ಫೆ.15: ಜಿಲ್ಲಾಡಳಿತ ಹಾಗೂ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಸೋಮವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು.
ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಸಂತ ಸೇವಾಲಾಲ್‌ರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಜಿಪಂ ಉಪ ಕಾರ್ಯದರ್ಶಿ ಕಿರಣ್ ಪಡ್ನೇಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ ಹಾಗೂ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.