ಕಾಲುವೆಗೆ ಬಿದ್ದ ಬಸ್: ಕನಿಷ್ಠ 45 ಪ್ರಯಾಣಿಕರು ಮೃತ್ಯು, ಕಾಣೆಯಾದವರಿಗಾಗಿ ಶೋಧ

Update: 2021-02-16 13:42 GMT
photo: twitter.com

ಭೋಪಾಲ್: ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಪಾಟ್ನಾಗ್ರಾಮದ ಬಳಿ ಮಂಗಳವಾರ ಬೆಳಗ್ಗೆ ಬಸ್ ವೊಂದು ಸೇತುವೆಯಿಂದ ಕಾಲುವೆಗೆ ಉರುಳಿ ಬಿದ್ದಿದೆ. ಈ ದುರಂತದಲ್ಲಿ  ಕನಿಷ್ಠ 45 ಪ್ರಯಾಣಿಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಕಾಣೆಯಾಗಿರುವ ಇತರ ಪ್ರಯಾಣಿಕರ ಶೋಧ ಕಾರ್ಯ ಮುಂದುವರಿದಿದೆ ಎಂದು NDTV ವರದಿ ಮಾಡಿದೆ.

ಬಸ್ ನಿಂದ 37 ಶವಗಳನ್ನು ಹೊರ ತೆಗೆಯಲಾಗಿದ್ದರೆ, ಇನ್ನೂ 7 ಶವಗಳನ್ನು ಕಾಲುವೆಯಿಂದ ವಶಪಡಿಸಿಕೊಳ್ಳಲಾಗಿದೆ. ರಕ್ಷಿಸಿದ್ದ ಓರ್ವ ಮಹಿಳೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ ಎಂದು ವರದಿಯಾಗಿದೆ.

ಬೆಳಗ್ಗೆ 8:30ರ ಸುಮಾರಿಗೆ ಘಟನೆ ಸಂಭವಿಸಿದ್ದು, ಈ ವೇಳೆ ಕನಿಷ್ಠ 50 ಪ್ರಯಾಣಿಕರು ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

ದುರಂತದಲ್ಲಿ ಮೃತಪಟ್ಟವರಲ್ಲಿ 4 ವರ್ಷದ ಮಗು, ಸತ್ನಾ ಜಿಲ್ಲೆಯಲ್ಲಿ ಪರೀಕ್ಷೆ ಹಾಜರಾಗಲು ತೆರಳುತ್ತಿದ್ದ 16 ಯುವತಿಯರು ಸೇರಿದ್ದಾರೆ.

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ರಾಜ್ಯcರಾಜಧಾನಿಯಲ್ಲಿ ಇಂದು ಹಮ್ಮಿಕೊಂಡಿದ್ದ ಎಲ್ಲ ಪ್ರಮುಖ ಕಾರ್ಯಕ್ರಮಗಳನ್ನು ರದ್ದುಪಡಿಸಿದರು. ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ., ಪ್ರಧಾನಮಂತ್ರಿ ಪರಿಹಾರ ನಿಧಿಯಿಂದ ಹೆಚ್ಚುವರಿ 2 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News