×
Ad

ಬೆಳಕೆ: ರಸ್ತೆ ಬದಿಯಲ್ಲಿ ಚಿರತೆಯ ಕಳೇಬರ ಪತ್ತೆ

Update: 2021-02-16 15:49 IST

ಭಟ್ಕಳ, ಫೆ.16: ಎಂಟರಿಂದ ಹತ್ತು ವರ್ಷ ಪ್ರಾಯದ ಚಿರತೆಯ ಕಳೇಬರವೊಂದು ಬೆಳಕೆ ಪಂಚಾಯತ್ ವ್ಯಾಪ್ತಿಯ ಕೆಕ್ಕೋಡು ಅರುವಕ್ಕಿ ರಸ್ತೆ ಬದಿಯಲ್ಲಿ ಸೋಮವಾರ ಪತ್ತೆಯಾಗಿದ್ದು, ವಿದ್ಯುತ್ ಸ್ಪರ್ಶಕ್ಕೊಳಗಾಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಚರತೆಯ ಮರಣೋತ್ತರ ಪರೀಕ್ಷೆ ನಡೆಸಿದ ಪಶು ವೈದ್ಯ ಮಿಥುನ್ ರಾಜ್, ಚಿರತೆಯ ದೇಹದ ಕೆಲ ಭಾಗಗಳನ್ನು ವಿಧಿ ವಿಜ್ಞಾನ ಪರೀಕ್ಷೆಗಾಗಿ ಕಳುಹಿಸಿಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.

 ಮಂಗಗಳ ಬೆನ್ನತ್ತಿ ಮರವೇರಿದ ಚಿರತೆಯ ಬಾಲ ವಿದ್ಯುತ್ ತಂತಿಗೆ ಸ್ಪರ್ಶಗೊಂಡಿದ್ದರಿಂದು ಇದು ಸಾವನ್ನಪ್ಪಿರುವ   ಅನುಮಾನ ವ್ಯಕ್ತವಾಗಿದೆ. ಈ ನಡುವೆ ಚಿರತೆಯ ಉಗುರುಗಳು ನಾಪತ್ತೆಯಾಗಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದ್ದು, ವಿಧಿವಿಜ್ಞಾನ ಪ್ರಯೋಗಾಲಯದ ವರದಿಯ ಬಳಿಕವಷ್ಟೇ ಸಾವಿಗೆ ನಿಖರವಾದ ಕಾರಣ ತಿಳಿದುಬರಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News