×
Ad

​ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ರಾಜೇಶ್ ಶೆಟ್ಟಿ ಆಯ್ಕೆ

Update: 2021-02-16 17:10 IST
ರಾಜೇಶ್ ಶೆಟ್ಟಿ,  ನಝೀರ್ ಪೊಲ್ಯ, ಉಮೇಶ್ ಮಾರ್ಪಳ್ಳಿ

ಉಡುಪಿ, ಫೆ.16: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2021-23ನೆ ಸಾಲಿನ ನೂತನ ಅಧ್ಯಕ್ಷರಾಗಿ ರಾಜೇಶ್ ಶೆಟ್ಟಿ ಅಲೆವೂರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಉಡುಪಿ ಅಜ್ಜರಕಾಡಿನ ಐಎಂಎ ಭವನದಲ್ಲಿ ಫೆ.16ರಂದು ನಡೆದ ಸಂಘದ ಮಹಾಸಭೆಯಲ್ಲಿ ಈ ಆಯ್ಕೆ ಪಕ್ರಿಯೆ ನಡೆಸಲಾಯಿತು. 
ಪ್ರಧಾನ ಕಾರ್ಯದರ್ಶಿಯಾಗಿ ನಝೀರ್ ಪೊಲ್ಯ, ಉಪಾಧ್ಯಕ್ಷರುಗಳಾಗಿ ಆರ್.ಬಿ.ಜಗದೀಶ್, ವಿನಯ್ ಪಾಯಸ್, ಬಾಲಕೃಷ್ಣ ಪೂಜಾರಿ, ಕೋಶಾಧಿಕಾರಿಯಾಗಿ ಉಮೇಶ್ ಮಾರ್ಪಳ್ಳಿ, ಸಹ ಕಾರ್ಯದರ್ಶಿಯಾಗಿ ರಾಜೇಶ್ ಗಾಣಿಗ, ಕ್ರೀಡಾ ಕಾರ್ಯ ದರ್ಶಿಯಾಗಿ ಸುರೇಶ್ ಎರ್ಮಾಳ್, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪ್ರಮೋದ್ ಸುವರ್ಣ, ಹರಿಪ್ರಸಾದ್ ನಂದಳಿಕೆ, ಗಣೇಶ್ ಸಾಬರಕಟ್ಟೆ, ಸಂಜೀವ ಆರ್ಡಿ, ಸಂತೋಷ್ ನಾಯಕ್, ಉದಯ ಕುಮಾರ್ ತಲ್ಲೂರು, ಹರ್ಷಿಣಿ ಅವರನ್ನು ಆಯ್ಕೆ ಮಾಡಲಾಯಿತು.

ಚುನಾವಣಾ ಪ್ರಕ್ರಿಯೆಯನ್ನು ವಾರ್ತಾಧಿಕಾರಿ ಮಂಜುನಾಥ್ ನಡೆಸಿಕೊಟ್ಟರು. ನಿರ್ಗಮನ ಅಧ್ಯಕ್ಷ ಗಣೇಶ್ ಪ್ರಸಾದ್ ಪಾಂಡೇಲು ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿದರು. ನಿರ್ಗಮನ ಪ್ರಧಾನ ಕಾರ್ಯದರ್ಶಿ ಸಂತೋಷ್ ನಾಯಕ್ ವರದಿ ವಾಚಿಸಿದರು. ನಿರ್ಗಮನ ಕೋಶಾಧಿಕಾರಿ ದಿವಾಕರ ಭಂಡಾರಿ ಲೆಕ್ಕಪತ್ರ ಮಂಡಿಸಿದರು. ರಾಕೇಶ್ ಕುಂಜೂರು ಕಾರ್ಯಕ್ರಮ ನಿರೂಪಿಸಿದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News