ಇನ್ನು ಮುಂದೆ ಬೆಂಗಳೂರಿನ ಟ್ರಾಫಿಕ್ ಸಿಗ್ನಲ್‍ ಗಳಲ್ಲಿ ಭಿಕ್ಷೆ ಬೇಡುವಂತಿಲ್ಲ: ಪೊಲೀಸ್ ಕಮಿಷನರ್ ಆದೇಶ

Update: 2021-02-16 11:48 GMT

ಬೆಂಗಳೂರು, ಫೆ.16: ರಸ್ತೆ ಬದಿಯಲ್ಲಿ ಭಿಕ್ಷಾಟನೆ ಮಾಡುವವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ಟ್ರಾಫಿಕ್ ಜಂಕ್ಷನ್‍ಗಳಲ್ಲಿ ಭಿಕ್ಷೆ ಬೇಡುವವರಿಂದ ವಾಹನ ಸವಾರರಿಗೆ ಕಿರಿಕಿರಿ ಜೊತೆ ಸಂಚಾರ ದಟ್ಟಣೆಯಾಗುತ್ತಿದೆ. ಇಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಎಲ್ಲ ಡಿಸಿಪಿಗಳಿಗೆ ಆಯುಕ್ತರು ಸೂಚನೆ ನೀಡಿದ್ದಾರೆ.

ನಗರದಲ್ಲಿ ರಸ್ತೆ ಬದಿ ಅಥವಾ ಸಂಚಾರ ಜಂಕ್ಷನ್‍ಗಳಲ್ಲಿ ಭಿಕ್ಷುಕರಿಂದ ಸಮಸ್ಯೆ ಉಂಟಾಗುತ್ತಿದೆ. ಅಲ್ಲದೇ, ಭಿಕ್ಷೆ ಬೇಡುವಾಗ ಹಣ ಕೊಡದವರ ಜೊತೆ ಅನುಚಿತವಾಗಿ ವರ್ತಿಸುತ್ತಿರುವುದು ಕಂಡುಬಂದಿದೆ. ಹೀಗಾಗಿ, ಟ್ರಾಫಿಕ್ ಸಿಗ್ನಲ್‍ನಲ್ಲಿ ಭಿಕ್ಷೆ ಬೇಡುವುದನ್ನು ತಪ್ಪಿಸಲು ಕಾನೂನು ಸುವ್ಯವಸ್ಥೆ ವಿಭಾಗ ಹಾಗೂ ಟ್ರಾಫಿಕ್ ಪೊಲೀಸರ ಜೊತೆ ಜಂಟಿಯಾಗಿ ಕಾರ್ಯಾಚರಣೆ ನಡೆಸಬೇಕೆಂದು ಡಿಸಿಪಿಗಳಿಗೆ ಸೂಚಿಸಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News