ದಿಶಾ ರವಿ ಬಂಧನ ಪ್ರಭುತ್ವದ ಹತಾಶ ಪ್ರಯತ್ನ: ಎಸ್‍ಡಿಪಿಐ ಖಂಡನೆ

Update: 2021-02-16 12:57 GMT

ಬೆಂಗಳೂರು, ಫೆ.16: ರೈತ ಹೋರಾಟವನ್ನು ಬೆಂಬಲಿಸಿ ಟ್ವೀಟ್ ಮಾಡಿದ ಸ್ವೀಡನ್ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‍ಬರ್ಗ್ ಟೂಲ್ ಕಿಟ್ ವಿಚಾರವಾಗಿ ರಾಜ್ಯದ ಯುವ ಪರಿಸರ ಹೋರಾಟಗಾರ್ತಿ ದಿಶಾ ರವಿಯವರನ್ನು ಬಂಧಿಸಿರುವುದನ್ನು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ತೀವ್ರವಾಗಿ ಖಂಡಿಸುತ್ತದೆ ಮತ್ತು ಕೂಡಲೇ ಅವರನ್ನು ಬಿಡುಗಡೆ ಮಾಡಬೇಕೆಂದು ಪಕ್ಷದ ಮುಖಡ ಅಬ್ದುಲ್ ಜಲೀಲ್ ಕೃಷ್ಣಾಪುರ ಒತ್ತಾಯಿಸಿದ್ದಾರೆ.

ಬಿಜೆಪಿ ಸರಕಾರ ಸಾಮಾಜಿಕ ಹೋರಾಟಗಾರರನ್ನು ಬಂಧಿಸುವುದು, ಕಿರುಕುಳ ನೀಡುವುದನ್ನು ನಿಲ್ಲಿಸಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಸರಕಾರದ ತಪ್ಪು ನೀತಿಗಳನ್ನು ಪ್ರಶ್ನಿಸುವ ಹಕ್ಕಿದೆ. ಇದನ್ನು ಹತ್ತಿಕ್ಕುವ ಪ್ರಯತ್ನ ಸಲ್ಲದು ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಈ ಕೂಡಲೇ ದಿಶಾ ರವಿಯವರನ್ನು ಬಿಡುಗಡೆಗೊಳಿಸಬೇಕು ರೈತ ವಿರೋಧಿ ಕಾನೂನುಗಳನ್ನು ಹಿಂಪಡೆಯಬೇಕೆಂದು ಎಸ್‍ಡಿಪಿಐ ರಾಜ್ಯ ಸಮಿತಿಯು ಒತ್ತಾಯಿಸುತ್ತದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News