ಕೆಎಸ್‌ಆರ್‌ಟಿಸಿ ಎಂಡಿ ಶಿವಯೋಗಿ ಕಳಸದರಿಗೆ ಮುಖ್ಯ ಕಾರ್ಯನಿರ್ವಣಾಧಿಕಾರಿ ಪ್ರಶಸ್ತಿ-2021
Update: 2021-02-16 20:46 IST
ಬೆಂಗಳೂರು, ಫೆ.16: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ)ಯ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ಅವರಿಗೆ ಮುಖ್ಯ ಕಾರ್ಯನಿರ್ವಣಾಧಿಕಾರಿ ಪ್ರಶಸ್ತಿ-2021 ಪ್ರದಾನ ಮಾಡಲಾಗಿದೆ.
ಈ ಪ್ರಶಸ್ತಿಯು ಕೆಎಸ್ಸಾರ್ಟಿಸಿಯಲ್ಲಿ ಮಾನವ ಸಂಪನ್ಮೂಲ ಸಂವೇದನೆ, ಸಂವಹನ ಕೋವಿಡ್ ಮತ್ತು ಕೋವಿಡ್ ನಂತರ ಮಾನವ ಸಂಪನ್ಮೂಲ ವಿಭಾಗದಲ್ಲಿ ನಾವೀನ್ಯತೆ, ಪರಿಣಾಮಕಾರಿ ಕಾರ್ಯವಿಧಾನಗಳನ್ನು ಕೈಗೊಂಡಿರುವುದನ್ನು ಗುರುತಿಸಿ ಪ್ರಶಸ್ತಿ ನೀಡಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.