ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಹುದ್ದೆಯಿಂದ ಪದಚ್ಯುತಗೊಂಡ ಕಿರಣ್ ಬೇಡಿ
Update: 2021-02-16 21:26 IST
ಹೊಸದಿಲ್ಲಿ: ಪುದುಚೇರಿಯಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರ ಬಿಕ್ಕಟ್ಟಿನಲ್ಲಿ ಸಿಲುಕಿರುವ ಮಧ್ಯೆ ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿಯವರನ್ನುಹುದ್ದೆಯಿಂಧ ಪದಚ್ಯುತಗೊಳಿಸಲಾಗಿದೆ ಎಂದು ndtv.com ವರದಿ ಮಾಡಲಾಗಿದೆ.
ಕಿರಣ್ ಬೇಡಿಯವರನ್ನು ಲೆಫ್ಟಿನೆಂಟ್ ಗವರ್ನರ್ ಹುದ್ದೆಯಿಂದ ತೆಗೆದುಹಾಕಲಾಗಿದೆ ಎಂದು ಮಂಗಳವಾರ ರಾತ್ರಿ ರಾಷ್ಟ್ರಪತಿ ಭವನ ಪ್ರಕಟನೆಯೊಂದರಲ್ಲಿ ತಿಳಿಸಿದೆ.
ತೆಲಂಗಾಣದ ರಾಜ್ಯಪಾಲೆ ತಮಿಳ್ ಸಾಯಿ ಸೌಂದರರಾಜನ್ ಅವರಿಗೆ ಹೊಸ ನೇಮಕಾತಿಯಾಗುವ ತನಕ ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಪ್ರಕಟನೆಯೊಂದರಲ್ಲಿ ತಿಳಿಸಿದ್ದಾರೆ.
ಪುದುಚೇರಿ ಅಸೆಂಬ್ಲಿ ಚುನಾವಣೆಗೆ ಇನ್ನು ಕೆಲವೆ ವಾರಗಳು ಬಾಕಿ ಇರುವಾಗ ಕಿರಣ್ ಬೇಡಿಯವರನ್ನು ಹುದ್ದೆಯಿಂದ ಕೆಳಗಿಳಿಸಲಾಗಿದೆ.