ದ.ಕ.: ಮಂಗಳವಾರ 19 ಮಂದಿಗೆ ಕೊರೋನ ಪಾಸಿಟಿವ್

Update: 2021-02-16 16:38 GMT

ಮಂಗಳೂರು, ಫೆ.16: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ 19 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. 20 ಮಂದಿ ಗುಣಮುಖರಾಗಿದ್ದಾರೆ. ಮಂಗಳವಾರ ಕೊರೋನದಿಂದ ಯಾವುದೇ ಸಾವು ಸಂಭವಿಸಿಲ್ಲ.

ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 34,221ಕ್ಕೆ ಏರಿಕೆಯಾಗಿದೆ. ಈ ಪೈಕಿ 262 ಸಕ್ರಿಯ ಪ್ರಕರಣಗಳು. 33,219 ಮಂದಿ ಗುಣಮುಖರಾಗಿದ್ದಾರೆ. 740 ಮಂದಿ ಮೃತಪಟ್ಟಿದ್ದಾರೆ ಎಂದು ದ.ಕ. ಜಿಲ್ಲಾಡಳಿತ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News