ಗೋವಾ ಮದ್ಯ ಅಕ್ರಮ ಸಾಗಾಟ: ಲಾರಿ ಸಹಿತ ಓರ್ವನ ಬಂಧನ

Update: 2021-02-16 18:22 GMT

ಕಾರವಾರ, ಫೆ. 16: ಮೀನಿನ ಲಾರಿಯಲ್ಲಿ 9 ಲಕ್ಷ ರೂ. ಮೌಲ್ಯದ ಅಕ್ರಮ ಗೋವಾ ಮದ್ಯ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ ಅಬಕಾರಿ ಸಿಬ್ಬಂದಿ ಲಾರಿ ಸಹಿತ ಓರ್ವ ಆರೋಪಿಯನ್ನು ವಶಕ್ಕೆ ಪಡೆದಿರುವ ಘಟನೆ ತಾಲೂಕಿನ ಮಾಜಾಳಿಯ ಅಬಕಾರಿ ಚೆಕ್ ಪೋಸ್ಟ್ ಬಳಿ ನಡೆದಿದೆ. ಬಂಧಿತನನ್ನು ಲಾರಿ ಚಾಲಕ ಆಂದ್ರ ಪ್ರದೇಶ ಮೂಲದ ಸೂರ್ಯನಾರಾಯಣ ಮೂರ್ತಿ ಎಂದು ತಿಳಿದು ಬಂದಿದೆ.

ಗೋವಾದಿಂದ ಆಗಮಿಸಿದ ಮೀನಿನ ಲಾರಿಯಲ್ಲಿ 300ಕ್ಕೂ ಹೆಚ್ಚು ಖಾಲಿ ಬಾಕ್ಸ್‌ಗಳು ಇರುವುದನ್ನು ಕಂಡು ಅನುಮಾನಗೊಂಡ ಅಬಕಾರಿ ಸಿಬ್ಬಂದಿ ತಪಾಸಣೆ ನಡೆಸಿದ್ದರು. ಈ ವೇಳೆ ಕ್ರೇಟ್‌ಗಳ ಮಧ್ಯೆ ಸುಮಾರು 505 ಲೀಟರ್‌ನ 9.13 ಲಕ್ಷ ರೂ. ಮೌಲ್ಯದ ಗೋವಾ ಮದ್ಯ ಪತ್ತೆ ಹಚ್ಚಿದ್ದಾರೆ. ಅಕ್ರಮ ಮದ್ಯ ಸಾಗಾಟಕ್ಕೆ ಬಳಸಿದ್ದ 10 ಚಕ್ರದ 16 ಲಕ್ಷ ರೂ. ಮೌಲ್ಯದ ಕಂಟೇನರ್ ಲಾರಿ, 90 ಸಾವಿರ ರೂ. ಮೌಲ್ಯದ ಪ್ಲಾಸ್ಟಿಕ್ ಬಾಕ್ಸ್ ಸೇರಿ 25 ಲಕ್ಷ ರೂ. ಮೌಲ್ಯದ ಸೊತ್ತನ್ನು ಅಬಕಾರಿ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News