ಉದ್ಯಮಿಗಳ ಮನೆ, ಆಸ್ಪತ್ರೆ, ಕಚೇರಿ ಸೇರಿ ರಾಜ್ಯದ ಹಲವೆಡೆ ಐಟಿ ದಾಳಿ

Update: 2021-02-17 07:16 GMT

ಬೆಂಗಳೂರು, ಫೆ.17-  ಬಿಜಿಎಸ್ ಶಿಕ್ಷಣ ಸಂಸ್ಥೆ, ಸಪ್ತಗಿರಿ ಮೆಡಿಕಲ್ ಕಾಲೇಜು, ತುಮಕೂರಿನ ಶ್ರೀದೇವಿ ಕಾಲೇಜು, ಮಂಗಳೂರಿನ ಉದ್ಯಮಿಗಳ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕಚೇರಿಗಳ ಮೇಲೆ ಐಟಿ ಇಲಾಖೆ ಬುಧವಾರ ದಾಳಿ ನಡೆಸಿದೆ ಎಂದು ವರದಿಯಾಗಿದೆ.

ಐಟಿ ಅಧಿಕಾರಿಗಳು ತಂಡ ತಂಡವಾಗಿ ಕರ್ನಾಟಕದ ವಿವಿಧ ನಗರಗಳಿಗೆ ಆಗಮಿಸಿದ್ದು ಮೆಡಿಕಲ್ ಕಾಲೇಜು, ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕಚೇರಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News