ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Update: 2021-02-17 11:11 GMT

ಬೆಂಗಳೂರು, ಫೆ. 17: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2020-21ನೆ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ಮೆಟ್ರಿಕ್ ಪೂರ್ವ ವೇತನಕ್ಕಾಗಿ https://ssp.karnataka.gov.in ವೆಬ್‍ಸೈಟ್‍ನಲ್ಲಿ, ಮೆಟ್ರಿಕ್ ನಂತರದ ವೇತನಕ್ಕಾಗಿ https://ssp.postmatric. karnataka.gov.in./2021/ ವೆಬ್‍ಸೈಟ್‍ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಮಾ.15 ಕೊನೆಯ ದಿನವಾಗಿರುತ್ತದೆ. 

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, 2ನೆ ಮಹಡಿ, ಮಿನಿ ವಿಧಾನಸೌಧ, ಯಲಹಂಕ, ಬೆಂಗಳೂರು ಉತ್ತರ ತಾಲೂಕು-560064 ಅಥವಾ ದೂ.ಸಂಖ್ಯೆ 080-28461351 ಗೆ ಸಂಪರ್ಕಿಸಬಹುದು ಎಂದು ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News