×
Ad

ಇಂಗ್ಲೆಂಡ್ ವಿರುದ್ಧದ ಕೊನೆಯ 2 ಟೆಸ್ಟ್ ಪಂದ್ಯಗಳಿಗೆ ಟೀಮ್ ಇಂಡಿಯಾ ಪ್ರಕಟ

Update: 2021-02-17 17:41 IST

ಹೊಸದಿಲ್ಲಿ: ಇಂಗ್ಲೆಂಡ್ ವಿರುದ್ಧ ಅಹಮದಾಬಾದ್ ನಲ್ಲಿ ನಡೆಯಲಿರುವ ಟೆಸ್ಟ್ ಸರಣಿಯ ಕೊನೆಯ ಎರಡು ಪಂದ್ಯಗಳಿಗೆ ಬಿಸಿಸಿಐ ಬುಧವಾರ ಭಾರತೀಯ ಕ್ರಿಕೆಟ್ ತಂಡವನ್ನು ಪ್ರಕಟಿಸಿದೆ. ತಂಡದಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿಲ್ಲ. ಫಿಟ್ನೆಸ್ ಪರಿಶೀಲನೆಯ ಬಳಿಕ ಉಮೇಶ್ ಯಾದವ್ ಅವರು ಶಾರ್ದೂಲ್ ಠಾಕೂರ್ ಬದಲಿಗೆ ತಂಡಕ್ಕೆ ಸೇರ್ಪಡೆಯಾದರು.

ಸರಣಿಯು 1-1ರಿಂದ ಸಮಬಲಗೊಂಡಿದ್ದು, ಭಾರತವು ಅಹಮದಾಬಾದ್ ನಲ್ಲಿ ಫೆಬ್ರವರಿ 24ರಂದು ಹಗಲು-ರಾತ್ರಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. 4ನೇ ಹಾಗೂ ಅಂತಿಮ ಪಂದ್ಯವು ಇದೇ ಮೈದಾನದಲ್ಲಿ ಮಾರ್ಚ್ 4ರಿಂದ ಆರಂಭವಾಗಲಿದೆ.

ಭಾರತ ತಂಡವನ್ನು ವಿರಾಟ್ ಕೊಹ್ಲಿ ನಾಯಕನಾಗಿ ಮುನ್ನಡೆಸಲಿದ್ದು, ಅಜಿಂಕ್ಯ ರಹಾನೆ ಉಪ ನಾಯಕನಾಗಿ ಮುಂದುವರಿಯಲಿದ್ದಾರೆ. ಅಕ್ಷರ್ ಪಟೇಲ್ ಹಾಗೂ ವಾಷಿಂಗ್ಟನ್ ಸುಂದರ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಲಾಗಿದೆ.

ಶಾರ್ದೂಲ್ ಠಾಕೂರ್ ಹಾಗೂ ಎಡಗೈ ಸ್ಪಿನ್ನರ್ ಶಹಬಾಝ್ ನದೀಮ್  ಅವರನ್ನು ವಿಜಯ ಹಝಾರೆ ಟ್ರೋಫಿಯಲ್ಲಿ ಆಡುವಂತಾಗಲು ತಂಡದಿಂದ ಬಿಡುಗಡೆ ಮಾಡಲಾಗಿದೆ. ಮೀಸಲು ಆಟಗಾರರ ಗುಂಪಿನಲ್ಲಿದ್ದ ಅಭಿಮನ್ಯು ಈಶ್ವರನ್ ಹಾಗೂ ಪ್ರಿಯಾಂಕ್ ಪಾಂಚಾಲ್ ರನ್ನು ತಂಡದಿಂದ ಕೈಬಿಡಲಾಗಿದೆ ಎಂದು ಬಿಸಿಸಿಐ ತಿಳಿಸಿದೆ.

ವಿಕೆಟ್ ಕೀಪರ್ ಗಳಾದ ರಿಷಭ್ ಪಂತ್ ಹಾಗೂ ವೃದ್ಧಿಮಾನ್ ಸಹಾ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಲಾಗಿದೆ.

ಈ ವರ್ಷಾರಂಭದಲ್ಲಿ ಆಸ್ಟ್ರೇಲಿಯ ಪ್ರವಾಸದ ವೇಳೆ ಗಾಯಗೊಂಡಿದ್ದ ಮುಹಮ್ಮದ್ ಶಮಿ ಹಾಗೂ ರವೀಂದ್ರ ಜಡೇಜ ಗಾಯದ ಸಮಸ್ಯೆಯಿಂದ ಚೇತರಿಸಿಕೊಂಡಿದ್ದರೂ ತಂಡಕ್ಕೆ ಸೇರಿಸಿಕೊಳ್ಳಲಾಗಿಲ್ಲ.

ಕೊನೆಯ 2 ಟೆಸ್ಟ್ ಪಂದ್ಯಗಳಿಗೆ ಭಾರತ ಕ್ರಿಕೆಟ್ ತಂಡ

ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ, ಮಯಾಂಕ್ ಅಗರ್ವಾಲ್,ಶುಭಮನ್ ಗಿಲ್, ಚೇತೇಶ‍್ವರ ಪೂಜಾರ, ಅಜಿಂಕ್ಯ ರಹಾನೆ(ಉಪ ನಾಯಕ), ಕೆ.ಎಲ್. ರಾಹುಲ್, ಹಾರ್ದಿಕ್ ಪಾಂಡ್ಯ. ರಿಷಭ್ ಪಂತ್(ವಿಕೆಟ್ ಕೀಪರ್), ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಆರ್.ಅಶ್ವಿನ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಇಶಾಂತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಮುಹಮ್ಮದ್ ಸಿರಾಜ್, ಉಮೇಶ್ ಯಾದವ್.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News