ಕಾಪು : ಕಾರು ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಮೃತ್ಯು
Update: 2021-02-17 20:06 IST
ಕಾಪು, ಫೆ.17: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಕೊಪ್ಪಲಂಗಡಿ ಕಮ್ಯುನಿಟಿ ಹಾಲ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಮಧ್ಯಾಹ್ನ ವೇಳೆ ನಡೆದಿದೆ.
ಮೃತರನ್ನು ಯು.ಶಾಬುದ್ದೀನ್ ಯಾನೆ ಶಾಬು ಸಾಹೇಬ್ (80) ಎಂದು ಗುರುತಿಸಲಾಗಿದೆ.
ಇವರು ರಸ್ತೆ ದಾಟಲು ನಿಂತಿದ್ದ ವೇಳೆ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಢಿಕ್ಕಿ ಹೊಡೆದಿದ್ದು, ಇದರಿಂದ ಗಂಭೀರವಾಗಿ ಗಾಯಗೊಂಡ ಇವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ.
ಶಾಬುದ್ದೀನ್ ಅವರು ಕಾಪು ಪೇಟೆ ಹೃದಯಭಾಗದಲ್ಲಿ ಸುಮಾರು 55 ವರ್ಷಗಳಿಂದ ಬಾಬಾ ಸೈಕಲ್ ಸ್ಟೋರ್ ನಡೆಸುತ್ತಿದ್ದರು. ಮೃತರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.