ಸಿದ್ದರಾಮಯ್ಯ, ಕುಮಾರಸ್ವಾಮಿ ಕೋತಿಗಳ ರೀತಿ ಹೇಳಿಕೆ ಕೊಡುತ್ತಿದ್ದಾರೆ: ಸಚಿವ ಈಶ್ವರಪ್ಪ

Update: 2021-02-17 15:11 GMT

ಶಿವಮೊಗ್ಗ, ಫೆ.17: ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುವ ವಿಚಾರವಾಗಿ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ ಕುಮಾರಸ್ವಾಮಿ ಮತ್ತ ಸಿದ್ದರಾಮಯ್ಯ ಅವರು ಕೋತಿಗಳ ರೀತಿಯಲ್ಲಿ ಹೇಳಿಕೆ ನೀಡುವ ಮೂಲಕ ಜನಮಾನಸದಿಂದ ದೂರವಾಗುತ್ತಿದ್ದಾರೆ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಲೇವಡಿ ಮಾಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಗೋ ಹತ್ಯೆಯಾಗುತ್ತಿವೆ, ಗೋವುಗಳ ಕಳ್ಳತನ ನಡೆಯುತ್ತಿದೆ ಎಂದು ದೂರು ನೀಡಿದರೆ ಗೋರಕ್ಷರ ಮೇಲೆಯೇ ಕ್ರಮ ಜರುಗಿಸಿದರು. ಇದರ ಪರಿಣಾಮವೇ ಕಾಂಗ್ರೆಸ್ ಸರ್ಕಾರ ಪತನವಾಯಿತು ಎಂದರು.

ಈಗ ಸಿದ್ದರಾಮಯ್ಯ ಮಸೀದಿ ಕೆಡವಿದ ಜಾಗದಲ್ಲಿ ರಾಮ ಮಂದಿರ ನಿರ್ಮಿಸದೆ ಬೇರೆಡೆ ನಿರ್ಮಿಸಿದರೆ ದೇಣಿಗೆ ನೀಡುತ್ತೇನೆ ಎಂಬ ಹೇಳಿಕೆ ನೀಡಿದ್ದಾರೆ. ಹೀಗೆ ಕೋತಿಗಳ ರೀತಿ ಮಾತನಾಡುವ ಮೂಲಕ ಜನರಿಂದ ಛೀ ಥೂ ಎಂದು ಬೈಸಿಕೊಳ್ಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಸಿದ್ದರಾಮಯ್ಯನವರು ನಿಧಿ ಸಂಗ್ರಹದ ಬಗ್ಗೆ ಲೆಕ್ಕ ಕೇಳುತ್ತಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಲೆಕ್ಕ ಕೇಳಲು ಇವರು ಯಾರು. ರಾಮ ಭಕ್ತರು ಕೇಳಿದರೆ ನೀಡಲಾಗುವುದು. ಧರ್ಮದ ಮತ್ತು ದೇಶದ ವಿರುದ್ಧ ಇವರ ಹೇಳಿಕೆ ನೀಡುತ್ತಿರುವುದರಿಂದ ದೇಶದ ಜನ ಕ್ಷಮಿಸಲ್ಲ. ರಾಮಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹಿಸುವ ವಿಚಾರವಾಗಿ ಹೇಳಿಕೆ ನೀಡುತ್ತಿರುವ ನಾಯಕರು ಬಹಿರಂಗ ಕ್ಷಮೆ ಕೇಳಬೇಕೆಂದು ಒತ್ತಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News