ಬಿಜೆಪಿ ಸರಕಾರದ ಆಡಳಿತದಲ್ಲಿ ಜನ ಸಾಮಾನ್ಯರ ಲೂಟಿ: ಸುರ್ಜೇವಾಲ

Update: 2021-02-17 16:51 GMT

ಬೆಂಗಳೂರು, ಫೆ.17: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರಗಳು ತೆರಿಗೆಗಳನ್ನು ಹೆಚ್ಚಿಸುವ ಮೂಲಕ ಜನಸಾಮಾನ್ಯರ ಲೂಟಿ ಮಾಡುತ್ತಿವೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಆರೋಪಿಸಿದ್ದಾರೆ.

ಬುಧವಾರ ನಗರದ ಕುಮಾರಕೃಪಾ ಅತಿಥಿ ಗೃಹದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರಕಾರವು ಜನರನ್ನು ಲೂಟಿ ಮಾಡುತ್ತಿದೆ. ಪೆಟ್ರೋಲ್, ಡೀಸೆಲ್ ದರಗಳು ಕಳೆದ 9 ದಿನಗಳಿಂದ ನಿರಂತರವಾಗಿ ಏರಿಕೆಯಾಗುತ್ತಿದೆ. ಇದರಿಂದ ಜನಸಾಮಾನ್ಯರ ಬದುಕು ದುಸ್ತರವಾಗುತ್ತಿದ್ದರೂ ಬಿಜೆಪಿ ಸರಕಾರಗಳು ಮಾತ್ರ ಕಣ್ಣು ಮುಚ್ಚಿಕೊಂಡು ಕೂತಿದೆ ಎಂದು ಕಿಡಿಗಾರಿದರು.

ರಾಜಸ್ಥಾನದಲ್ಲಿ ವ್ಯಾಟ್ ದರ ಕಡಿಮೆ ಆಗಿದೆ. ಆದರೆ, ಕರ್ನಾಟಕದಲ್ಲಿ ಮಾತ್ರ ಯಾಕೆ ವ್ಯಾಟ್ ದರವನ್ನು ಕಡಿಮೆ ಮಾಡಿಲ್ಲ ಎಂಬುದು ಅರ್ಥವಾಗುತ್ತಿಲ್ಲ. ಪೆಟ್ರೋಲ್, ಡೀಸೆಲ್ ಜೊತೆಗೆ ಅಡುಗೆ ಅನಿಲ ಸಿಲಿಂಡರ್ ದರವು 770 ರೂ.ಗಳನ್ನು ದಾಟಿದೆ. ದಿನಬಳಕೆಯ ವಸ್ತುಗಳ ದರವು ಹೆಚ್ಚಾಗಿದೆ ಎಂದು ಸುರ್ಜೇವಾಲ ಆಕ್ರೋಶ ವ್ಯಕ್ತಪಡಿಸಿದರು.

ನರೇಂದ್ರ ಮೋದಿ ಸರಕಾರವು 2020-21ನೆ ಆರ್ಥಿಕ ಸಾಲಿನಲ್ಲಿ 2 ಲಕ್ಷ ಕೋಟಿ ರೂ.ಗಳನ್ನು ಸಂಗ್ರಹಿಸಲು ಮುಂದಾಗಿದೆ. ಇದರಿಂದ, ಜನ ಸಾಮಾನ್ಯರ ಮೇಲೆ ತೆರಿಗೆಗಳ ಮೂಲಕ ಮತ್ತಷ್ಟು ಹೊರೆಯನ್ನು ಹೊರಿಸುತ್ತಿದೆ ಎಂದು ಅವರು ಕಿಡಿಗಾರಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News