ರಾಜ್ಯದ ವಸತಿ ಶಾಲೆಗಳಲ್ಲಿ 6ನೆ ತರಗತಿ ದಾಖಲಾತಿ: ಪರೀಕ್ಷೆ ಪ್ರವೇಶ ಪತ್ರ ಪಡೆಯಲು ಸೂಚನೆ

Update: 2021-02-17 18:16 GMT

ಬೆಂಗಳೂರು, ಫೆ.17: ರಾಜ್ಯದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ವಸತಿ ಶಾಲೆಗಳಲ್ಲಿ 6ನೆ ತರಗತಿಗೆ ದಾಖಲಾತಿ ಪಡೆಯಲು ಫೆ.24ರಂದು ಮಧ್ಯಾಹ್ನ 2.30 ರಿಂದ 4.30ರವರೆಗೆ ನಡೆಸಲು ನಿಗದಿಪಡಿಸಿರುವ ಪ್ರವೇಶ ಪರೀಕ್ಷೆಗೆ ಅಭ್ಯರ್ಥಿಗಳು ಪರೀಕ್ಷೆಯ ಪ್ರವೇಶ ಪತ್ರವನ್ನು(Hall Ticket) ತಾವು ಅರ್ಜಿ ಸಲ್ಲಿಸಿದ ವಸತಿ ಶಾಲೆಯ ಪ್ರಾಂಶುಪಾಲರ ಮುಖಾಂತರ ಪಡೆಯಬೇಕು.

ಪ್ರವೇಶ ಪತ್ರದಲ್ಲಿ ನೀಡಿರುವ ಸೂಚನೆಗಳನ್ನು ಜಾಗರೂಕತೆಯಿಂದ ಓದಿಕೊಂಡು ನಿಗದಿತ ದಿನಾಂಕ ಮತ್ತು ಸಮಯಕ್ಕೆ ಸರಿಯಾಗಿ ಸಂಬಂಧಿಸಿದ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ. ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿ ಪರೀಕ್ಷೆಗೆ ಹಾಜರಾಗಬೇಕು. ಅಭ್ಯರ್ಥಿಗಳು ನೀಲಿ ಅಥವಾ ಕಪ್ಪು ಶಾಯಿಯ ಬಾಲ್ ಪಾಯಿಂಟ್ ಪೆನ್ ಅನ್ನು ಮಾತ್ರ ಉಪಯೋಗಿಸಬೇಕು. ಹೆಚ್ಚಿನ ವಿವರಗಳನ್ನು ಪ್ರಾಧಿಕಾರದ ಅಥವಾ ವಸತಿ ಶಿಕ್ಷಣ ಇಲಾಕೆಯ ವೆಬ್‍ಸೈಟಿನಿಂದ ಪಡೆಯಬಹುದಾಗಿದೆ ಎಂದು ರಾಜ್ಯ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News