ಮಂಗಳೂರಲ್ಲಿ ಮುಂದುವರಿದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ
Update: 2021-02-18 11:53 IST
ಮಂಗಳೂರು : ನಗರದಲ್ಲಿನ ನಾಲ್ವರು ಪ್ರತಿಷ್ಠಿತ ಉದ್ಯಮಿಗಳ ಒಡೆತನದ ಸಂಸ್ಥೆಗಳ ಮೇಲಿನ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳ ದಾಳಿ ಗುರುವಾರವೂ ಮುಂದುವರಿದಿದೆ.
ನಗರದ ಪ್ರತಿಷ್ಠಿತ ಆಸ್ಪತ್ರೆಗಳನ್ನೇ ಗುರಿಯಾಗಿಸಿಕೊಂಡು ನಡೆಯುತ್ತಿರುವ ದಾಳಿಯಲ್ಲಿ ಕೋಟ್ಯಂತರ ರೂ. ನಗದು, ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
260ಕ್ಕೂ ಹೆಚ್ಚು ಅಧಿಕಾರಿಗಳು ನಾಲ್ವರು ಉದ್ಯಮಿಗಳಿಗೆ ಸೇರಿದ ಆಸ್ಪತ್ರೆ ಸಹಿತ ಇತರ ಸಂಸ್ಥೆಗಳಲ್ಲಿ ಮತ್ತಷ್ಟು ಶೋಧ ಕಾರ್ಯ ಮುಂದುವರಿಸಿದ್ದಾರೆ ಎಂದು ತಿಳಿದುಬಂದಿದೆ.