ಕರ್ಣಾಟಕ ಬ್ಯಾಂಕ್ ವತಿಯಿಂದ ಹೆದ್ದಾರಿ ಹೂದೋಟ, ತಡೆಬೇಲಿ ಯೋಜನೆ ಲೋಕಾರ್ಪಣೆ
ಮಂಗಳೂರು : ಕರ್ಣಾಟಕ ಬ್ಯಾಂಕ್ ವತಿಯಿಂದ 1.10 ಕೋಟಿ ರೂ. ವೆಚ್ಚದಲ್ಲಿ ಸಿಎಸ್ಆರ್ ನಿಧಿಯಿಂದ 3.10 ಕಿ.ಮೀ. ಉದ್ದದ ಐದರಿಂದ ಆರು ಅಡಿ ಅಗಲದ (ರಾ.ಹೆ.66) ಹೆದ್ದಾರಿ ರಸ್ತೆ ನಡುವಿನ ಹೂ ದೋಟ ಮತ್ತು ತಡೆಬೇಲಿ ಯೋಜನೆಯ ಲೋಕಾರ್ಪಣೆ ಕಾರ್ಯಕ್ರಮ ನಂತೂರಿನಲ್ಲಿಂದು ನಡೆಯಿತು.
ಬ್ಯಾಂಕಿನ ಅಧ್ಯಕ್ಷ ಪಿ.ಜಯರಾಮ ಭಟ್ ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು.
ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಆಡಳಿತ ನಿರ್ದೇಶಕ ಎಂ.ಎಸ್. ಮಹಾಬಲೇಶ್ವರ ಸ್ವಾಗತಿಸಿ ,ಪ್ರಾಸ್ತಾವಿಕ ವಾಗಿ ಮಾತನಾಡಿ, ಜನರ ಸುರಕ್ಷತೆ, ನಗರದ ಸೌಂದರ್ಯ ಹೆಚ್ಚಿಸುವುದು ಪರಿಸರಕ್ಕೆ ಸಂರಕ್ಷಣೆಯ ಬಗ್ಗೆ ಜಾಗ್ರತಿ ಮೂಡಿಸುವ ನಿಟ್ಟಿನಲ್ಲಿ ಈ ಯೋಜನೆಯನ್ನು ಬ್ಯಾಂಕಿನ ಸಿಎಸ್ ಆರ್ ನಿಧಿಯಿಂದ ಜಿಲ್ಲಾಡಳಿತದ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದೆ. ಮುಂದಿನ ಹಂತದಲ್ಲಿ ಮಹಾವೀರ ವ್ರತ್ತದಲ್ಲಿ ನಿರ್ಮಿಸಲಾಗಿದ್ದ ವೃತ್ತವನ್ನು ಪುನರ್ ನವೀಕರಿಸುವ ಉದ್ದೇಶ ಹೊಂದಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಸಮಾರಂಭದಲ್ಲಿ ಶಾಸಕ ವೇದವ್ಯಾಸ ಕಾಮತ್, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀ ಪ್ರಸಾದ್, ಮನಪಾ ಆಯುಕ್ತ ಅಕ್ಷಯ ಶ್ರೀ ಧರ್, ಡಿಸಿಪಿ ವಿನಯ ಗಾಂವ್ಕರ್, ಎನ್ ಎಚ್ ಎಐ ಯೋಜನಾ ನಿರ್ದೇಶಕ ಶಿಶು ಮೋಹನ್, ಎಸಿಪಿ ಎಂ.ಎ.ನಟರಾಜ್, ಕದ್ರಿ ಪೊಲೀಸ್ ಇನ್ಸ್‌ಪೆಕ್ಟರ್ ಗೋಪಾಲಕೃಷ್ಣ ಭಟ್, ಬ್ಯಾಂಕ್ ನ ಜಿ.ಎಂ.ಮಂಜುನಾಥ ಭಟ್, ಸಿಒಒ ಬಾಲಚಂದ್ರ ವೈ.ವಿ, ಎಜಿಎಂ ಶ್ರೀ ನಿವಾಸ ದೇಶಪಾಂಡೆ ಮೊದಲಾದವರು ಉಪಸ್ಥಿತರಿದ್ದರು.