ಮಂಗಳೂರು ಏರ್‌ಪೋರ್ಟ್: 53 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ವಶ, ಮಹಿಳೆ ಸಹಿತ ಇಬ್ಬರು ಸೆರೆ
Update: 2021-02-18 15:28 IST
ಮಂಗಳೂರು: ಬಜ್ಪೆ ಏರ್‌ಪೋರ್ಟ್‌ನಲ್ಲಿ ನ್ಯಾಪ್‌ಕಿನ್‌ನಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದುದನ್ನು ಕಸ್ಟಮ್ಸ್ ಅಧಿಕಾರಿಗಳು ಗುರುವಾರ ಪತ್ತೆ ಹಚ್ಚಿದ್ದಾರೆ.
ಏರ್‌ಪೋರ್ಟ್‌ನಲ್ಲಿ ಮಹಿಳೆ ಸಹಿತ ಇಬ್ಬರನ್ನು ಬಂಧಿಸಲಾಗಿದೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ವಿಮಾನದಲ್ಲಿ ಆಗಮಿಸಿದ ಪ್ರಯಾಣಿಕರನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಇಬ್ಬರು ಪ್ರಯಾಣಿಕರು ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಯಾನಿಟರಿ ನ್ಯಾಪ್‌ಕಿನ್‌ನಲ್ಲಿ 53.50 ಲಕ್ಷ ಮೌಲ್ಯದ ಒಂದು ಕೆ.ಜಿ. ಚಿನ್ನವನ್ನು ದೇಹದಲ್ಲಿರಿಸಿ ಸಾಗಾಟ ಮಾಡಲಾಗುತ್ತಿತ್ತು. ಆರೋಪಿಗಳನ್ನು ಬಂಧಿಸಿ, ಸೊತ್ತನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.