ವಿಧಾನಪರಿಷತ್: ಧರ್ಮೇಗೌಡ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಮಾ.15ರಂದು ಚುನಾವಣೆ

Update: 2021-02-18 11:34 GMT

ಬೆಂಗಳೂರು, ಫೆ.18: ವಿಧಾನಪರಿಷತ್ತಿನ ಉಪ ಸಭಾಪತಿಯಾಗಿದ್ದ ಎಸ್.ಎಲ್.ಧರ್ಮೇಗೌಡ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಮಾ.15ರಂದು ಕೇಂದ್ರ ಚುನಾವಣಾ ಆಯೋಗ ಉಪ ಚುನಾವಣೆ ಘೋಷಿಸಿದೆ. ವಿಧಾನಸಭೆಯಿಂದ ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ಫೆ.25ರಂದು ಚುನಾವಣಾ ಅಧಿಸೂಚನೆ ಹೊರಬೀಳಲಿದೆ. ಮಾ.4ರಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದೆ. ಮಾ.5ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆಯನ್ನು ಹಿಂಪಡೆಯಲು ಮಾ.8 ಅಂತಿಮ ದಿನವಾಗಿದೆ. ಮಾ.15ರಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಸಂಜೆ 5 ಗಂಟೆ ನಂತರ ಮತಗಳ ಎಣಿಕೆ ಕಾರ್ಯ ನಡೆಸಿ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಕೇಂದ್ರ ಚುನಾವಣಾ ಅಯೋಗದ ಅಧೀನ ಕಾರ್ಯದರ್ಶಿ ಪ್ರಫುಲ್ ಅವಸ್ಥಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News