ಫೆ.20ರಂದು ಹೊನಲು ಬೆಳಕಿನ ಖೋ ಖೋ ಪಂದ್ಯಾಟ
Update: 2021-02-18 19:19 IST
ಉಡುಪಿ, ಫೆ.18: ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಡಾ.ಜಿ.ಶಂಕರ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಮತ್ತು ಜಿಲ್ಲಾ ಖೋ ಖೋ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಪುರುಷರ ಆಹ್ವಾನಿತ ತಂಡಗಳ ಹೊನಲು ಬೆಳಕಿನ ಖೋ ಖೋ ಪಂದ್ಯಾಟ ಫೆ.20ರಂದು ಅಪರಾಹ್ನ 3 ರಿಂದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಸಂಜೆ 6 ಗಂಟೆಗೆ ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾಧಿಕಾರಿ ಜಿ. ಜಗದೀಶ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ, ಜಿಪಂ ಉಪಾಧ್ಯಕ್ಷೆ ಶೀಲಾ ಶೆಟ್ಟಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ ಹೆಗ್ಡೆ ಮಾರಾಳಿ, ನಗರಸಬೆ ಅಧ್ಯಕ್ಷೆ ಸುಮಿತ್ರಾ ನಾಯಕ್ ಭಾಗವಹಿಸಲಿದ್ದಾರೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.