ಮರಗಳ ತೆರವಿಗಾಗಿ ಸಾರ್ವಜನಿಕ ಅಹವಾಲು ಸಭೆ
ಉಡುಪಿ, ಫೆ.18: ಕುಂದಾಪುರ ತಾಲೂಕು ಶಂಕರನಾರಾಯಣ ಗ್ರಾಮದ ಸ.ನಂ: 176/1ಪಿ1ರಲ್ಲಿ ಎಂಟು ಎಕರೆ ಡಾ. ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಗೆ ಸಮಾಜ ಕಲ್ಯಾಣ ಇಲಾಖಾ ಹೆಸರಿನಲ್ಲಿ ಕಾದಿರಿಸಿರುವ ಜಮೀನಿನಲ್ಲಿರುವ 125 ವಿವಿಧ ಜಾತಿಯ ಮರಗಳನ್ನು ಕಡಿಯಲು ಉದ್ದೇಶಿಸಲಾಗಿದೆ.
ಈ ಸ್ಥಳದಲ್ಲಿರುವ ಮರಗಳು ಕರ್ನಾಟಕ ವೃಕ್ಷ ಸಂರಕ್ಷಣಾ ಕಾಯ್ದೆಯಡಿ ಬರುವುದರಿಂದ, ಕಾಯ್ದೆಯ ಪ್ರಕಾರ 50ಕ್ಕಿಂತ ಹೆಚ್ಚು ಮರಗಳನ್ನು ಕಡಿಯಬೇಕಾದಲ್ಲಿ ಸಾರ್ವಜನಿಕರ ಅಹವಾಲನ್ನು ಸ್ವೀಕರಿಸಿ ಕ್ರಮ ಕೈಗೊಳ್ಳಬೇಕಾಗಿದ್ದು, ಮಾರ್ಚ್ 1ರಂದು ಅಪರಾಹ್ನ 3 ಗಂಟೆಗೆ ಶಂಕರನಾರಾಯಣ ವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಸಭೆಯನ್ನು ಏರ್ಪಡಿಸಲಾಗಿದೆ.
ಸಾರ್ವಜನಿಕರು ಸಭೆಗೆ ಹಾಜರಾಗಿ ಆಕ್ಷೇಪಣೆ ಸಲ್ಲಿಸಬಹುದು ಅಥವಾ ಈ ದಿನಾಂಕದ ಒಳಗಾಗಿ ವೃಕ್ಷ ಅಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ, ಕುಂದಾಪುರ ವಿಬಾಗ, ಕುಂದಾಪುರ ಇವರಿಗೆ ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ kpurforest@yahoo.com -ನಲ್ಲಿಯೂ ಸಹ ಆಕ್ಷೇಪಣೆ ಸಲ್ಲಿಸಬಹುದು ಎಂದು ಕುಂದಾಪುರ ವಿಬಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.