ಯುವ ಸ್ವಯಂ ಸೇವಕರ ಹುದ್ದೆಗೆ ಅರ್ಜಿ ಆಹ್ವಾನ
Update: 2021-02-18 19:24 IST
ಉಡುಪಿ, ಫೆ.18: ಕೇಂದ್ರ ಸರಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯವು ದೇಶದಾದ್ಯಂತ ರಾಷ್ಟ್ರೀಯ ಯುವ ಸ್ವಯಂಸೇವಕರು ಎಂಬ ಕಾರ್ಯಕ್ರಮವನ್ನು ನೆಹರು ಯುವ ಕೇಂದ್ರದ ಮೂಲಕ ಅನುಷ್ಠಾನಗೊಳಿಸುತ್ತಿದ್ದು, ಈ ಯೋಜನೆಯಡಿಯಲ್ಲಿ ಜಿಲ್ಲಾವಾರು ಯುವ ಜನರನ್ನು ನೇಮಕ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು 18ರಿಂದ 29 ವರ್ಷ ವಯೋಮಿತಿಯವರಾಗಿರಬೇಕು. ಆಯ್ಕೆಯಾದ ಅ್ಯರ್ಥಿಗಳಿಗೆ ಪ್ರವಾಸ ಭತ್ಯೆ ಸೇರಿ ಗೌರವಧನವಾಗಿ ತಿಂಗಳಿಗೆ 5000 ರೂ. ನೀಡಲಾಗುವುದು.
ಅರ್ಜಿ ಸಲ್ಲಿಸಲು ಫೆ.25 ಕೊನೆಯ ದಿನ.ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್- https://nyks.nic.in/nycapp/main.asp -ಅಥವಾ ಜಿಲ್ಲಾ ಯುವ ಅಧಿಕಾರಿಗಳು, ನೆಹರು ಯುವ ಕೇಂದ್ರ, ರಜತಾದ್ರಿ, ಜಿಲ್ಲಾಧಿಕಾರಿ ಕಛೇರಿ ಆವರಣ, ಮಣಿಪಾಲ ದೂ. ಸಂಖ್ಯೆ: 0820-2574992ನ್ನು ಸಂಪರ್ಕಿಸುವಂತೆ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ವಿಲ್ಪ್ರೆಡ್ ಡಿಸೋಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.