ಮಣಿಪಾಲ ಮ್ಯಾರಥಾನ್ ಮುಂದೂಡಿಕೆ
Update: 2021-02-18 19:33 IST
ಉಡುಪಿ, ಫೆ.18:ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ) ಮಣಿಪಾಲ ಹಾಗೂ ಉಡುಪಿ ಜಿಲ್ಲಾ ಅಮೆಚೂರು ಅಥ್ಲೆಟಿಕ್ ಅಸೋಸಿಯೇಷನ್ ವತಿಯಿಂದ ಫೆಬ್ರವರಿ ತಿಂಗಳಲ್ಲಿ ನಡೆಯಬೇಕಿದ್ದ ಮಣಿಪಾಲ ಮ್ಯಾರಥಾನ್‌ನ ಐದನೇ ಆವೃತ್ತಿಯನ್ನು ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ.
ಈ ಪ್ರತಿಷ್ಠಿತ ಮ್ಯಾರಥಾನ್‌ನ್ನು ಅಕ್ಟೋಬರ್ ತಿಂಗಳ ಸುಮಾರಿಗೆ ಮುಂದೂಡಲಾಗಿದ್ದು, ನಿರ್ದಿಷ್ಟ ದಿನಾಂಕವನ್ನು ಮುಂದೆ ಪ್ರಕಟಿಸಲಾಗುವುದು ಎಂದು ಮಾಹೆಯ ಪ್ರೊ ಚಾನ್ಸಲರ್ ಡಾ.ಎಚ್.ಎಸ್.ಬಲ್ಲಾಳ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.